Breaking News

ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ

Spread the love

ರಾಯಚೂರು: ಜಿಲ್ಲೆಯಲ್ಲಿ ಕಾಲೇಜಿಗೆ ತೆರಳಿದ್ದಂತ ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಹೀಗಾಗಿ ಪೋಷಕರು ಮಕ್ಕಳು ನಾಪತ್ತೆಯಾಗಿರೋದ್ರಿಂದ ಆತಂಕಗೊಂಡಿದ್ದಾರೆ.

 

ರಾಯಚೂರು ಜಿಲ್ಲೆಯ ಸ್ಟೇಷನ್ ರಸ್ತೆಯಲ್ಲಿರುವಂತ ಸರ್ಕಾರಿ ಕಾಲೇಜಿನಲ್ಲಿ ಓದುತ್ತಿದ್ದಂತ ನಾಲ್ವರು ವಿದ್ಯಾರ್ಥಿನಿಯರು, ಕಾಲೇಜಿಗೆ ಹೋಗಿ ಬರೋದಾಗಿ ತೆರಳಿದ್ದರು. ಹೀಗೆ ತೆರಳಿದ್ದಂತ ನಾಲ್ವರು ವಿದ್ಯಾರ್ಥಿನಿಯರು ಮನೆಗೆ ವಾಪಾಸ್ ಆಗಿಲ್ಲ ಎಂಬುದಾಗಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

 

ವಿದ್ಯಾರ್ಥಿನಿಯರ ಪೋಷಕರು ನೀಡಿದಂತ ದೂರನಿಂದಾಗಿ ಸದರಬಜಾರ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ನಾಪತ್ತೆಯಾಗಿರುವಂತ ನಾಲ್ವರು ವಿದ್ಯಾರ್ಥಿನಿಯರ ಪತ್ತೆಗಾಗಿ ಪಿಎಸ್‌ಐ ನೇತೃತ್ವದಲ್ಲಿ ತಂಡವನ್ನು ರಚಿಸಿ, ಪತ್ತೆಗಾಗಿ ತನಿಖೆಗೆ ಇಳಿದಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ