ಬೈಲಹೊಂಗಲ: ಜನನ ಮತ್ತು ಮರಣ ನೋಂದಣಿ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದ ನ್ಯಾಯಾಂಗದ ವ್ಯಾಪ್ತಿಯನ್ನು ಬದಲಾವಣೆ ಮಾಡಿರುವುದನ್ನು ರದ್ದುಗೊಳಿಸಿ ಮೊದಲಿನಂತೆ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಮುಂದುವರಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕು ವಕೀಲರ ಸಂಘದಿಂದ ಪ್ರತಿಭಟನೆ ನಡೆಯಿತು.
ತಹಶೀಲ್ದಾರ್ ಬಸವರಾಜ ನಾಗರಾಳ ಅವರಿಗೆ ವಕೀಲರು ಸೋಮವಾರ ಮನವಿ ಸಲ್ಲಿಸಿದರು.
ವಕೀಲರ ಸಂಘದ ಉಪಾಧ್ಯಕ್ಷ ಎಂ.ಆರ್. ಸೋಮಣ್ಣವರ, ವಕೀಲರ ಸಂಘದ ಕಾರ್ಯದರ್ಶಿ ಸಂತೋಷ ಭಾವಿ ಮಾತನಾಡಿ, ‘ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ಸಂಬಂಧಿಸಿದ ವಿಷಯಗಳು ಈ ಹಿಂದೆ ಜೆ.ಎಂ.ಎಫ್.ಸಿ. ನ್ಯಾಯಾಲಯದ ವ್ಯಾಪ್ತಿಗೆ ಇತ್ತು. ಈಗ ಅದಕ್ಕೆ ಬದಲಾಗಿ ಉಪವಿಭಾಗಾಧಿಕಾರಿಗಳ ನ್ಯಾಯಾಲಯಕ್ಕೆ ಪ್ರಕರಣಗಳ ಇತ್ಯರ್ಥಕ್ಕೆ ಅಧಿಕಾರ ನೀಡಿ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಇದರಿಂದ ಪಕ್ಷಗಾರರಿಗೆ ಅನ್ಯಾಯವಾಗುತ್ತದೆ. ಕೂಡಲೇ ಕರ್ನಾಟಕ ಜನನ, ಮರಣ ನೋಂದಣಿ ತಿದ್ದುಪಡಿ ನಿಯಮವನ್ನು ರದ್ದುಗೊಳಿಸ ಈ ಮೊದಲಿನಂತೆ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಮುಂದುವರಿಸಬೇಕು ಎಂದು ಮನವಿ ಮಾಡಿದರು.