Breaking News

ಕೊಲೆಗಡುಕ ಶಕ್ತಿಗಳ ಮುಂದೆ ಸರ್ಕಾರ ಮಂಡಿಯೂರಿದೆ: ಎಚ್‌ಡಿಕೆ

Spread the love

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ.

ರಾಜ್ಯದಲ್ಲಿ ಇತ್ತೀಚೆಗೆ ನಡೆದ ಹತ್ಯೆ ಪ್ರಕರಣಗಳನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

‘ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಬಿಜೆಪಿ ಸರ್ಕಾರ ಮೈಮರೆತಿದ್ದು ಯಾಕೆ’ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

‘ಪ್ರತಿ ಕೊಲೆ ಅದ ಮೇಲೆಯೂ ಮೈ ಕೊಡವಿಕೊಂಡು ಎದ್ದೇಳುವ ಬಿಜೆಪಿ ಸರ್ಕಾರ, ಕೊಲೆಯೇ ಆಗದಂತೆ ತಡೆಯುವ ಪ್ರಯತ್ನ ಮಾಡುತ್ತಿಲ್ಲ, ಏಕೆ? ಕೊಲೆಗಳೆಂದರೆ ಕೆಲವರಿಗೇಕೆ ಇಷ್ಟೊಂದು ಇಷ್ಟ? ಚುನಾವಣೆ ಹತ್ತಿರ ಆದಂತೆಲ್ಲ ನೆತ್ತರ ಓಕುಳಿ ಹರಿಯುತ್ತಿದೆ! ಈ ನೆತ್ತರ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ’ ಎಂದು ಎಚ್‌ಡಿಕೆ ಆಕ್ರೋಶ ಹೊರಹಾಕಿದ್ದಾರೆ.


Spread the love

About Laxminews 24x7

Check Also

ಕಿರ್ಲೋಸ್ಕರ್​ನಿಂದ ರಾಜ್ಯದಲ್ಲಿ ₹3,000 ಕೋಟಿ ಹೂಡಿಕೆ: ಸಚಿವ ಎಂ.ಬಿ. ಪಾಟೀಲ್

Spread the loveಕಿರ್ಲೋಸ್ಕರ್​ನಿಂದ ರಾಜ್ಯದಲ್ಲಿ ₹3,000 ಕೋಟಿ ಹೂಡಿಕೆ: ಸಚಿವ ಎಂ.ಬಿ. ಪಾಟೀಲ್ ಪುಣೆ/ಬೆಂಗಳೂರು: ಕಿರ್ಲೋಸ್ಕರ್ ಫೆರೋಸ್ ಇಂಡಸ್ಟ್ರೀಸ್ ಕರ್ನಾಟಕದಲ್ಲಿ ಮುಂದಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ