ಉಡುಪಿ: ಜನರು ನಿಮ್ಮ ಮೇಲೆ ಇಟ್ಟಿರುವ ಗೌರವವನ್ನು ಉಳಿಸಿಕೊಳ್ಳಿ ಎಂದು ಹೇಳುವ ಮೂಲಕ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಂತಹ ಪ್ರವೀಣ್‍ನನ್ನು ಕೊಲೆ ಮಾಡಿರುವುದು ಖಂಡನೀಯವಾಗಿದೆ. ಇದನ್ನು ಉಗ್ರವಾದ ಮಾತುಗಳಿಂದ ನಾವು ಖಂಡಿಸುತ್ತೇವೆ. ಈ ನೋವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ಕೃಷ್ಣನಲ್ಲಿ ಪ್ರಾರ್ಥಿಸುತ್ತೇವೆ ಎಂದರು.
ಇತ್ತೀಚೆಗೆ ಈ ತರಹದ ಕೊಲೆಗಳು ಹೆಚ್ಚಾಗಿ ರಾಜ್ಯದಲ್ಲಿ ನಡೆಯುತ್ತಿವೆ. ಇದರಿಂದಾಗಿ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಜನರು ಧಂಗೆ ಏಳುವ ಮೊದಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಜೊತೆಗೆ ಸರ್ಕಾರದ ಮೇಲೆ ಜನ ವಿಶ್ವಾಸ ಕಳೆದುಕೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಬೇಕು. ಸರ್ಕಾರವು ಘಟನೆಗೆ ಸಂಬಂಧಿಸಿದಂತೆ ತೀವ್ರವಾಗಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
Laxmi News 24×7