Breaking News

ಜನರು ನಿಮ್ಮ ಮೇಲೆ ಇಟ್ಟಿರುವ ಗೌರವವನ್ನು ಉಳಿಸಿಕೊಳ್ಳಿ: ಸರ್ಕಾರಕ್ಕೆ ಪೇಜಾವರ ಶ್ರೀ ಎಚ್ಚರಿಕೆ

Spread the love

ಉಡುಪಿ: ಜನರು ನಿಮ್ಮ ಮೇಲೆ ಇಟ್ಟಿರುವ ಗೌರವವನ್ನು ಉಳಿಸಿಕೊಳ್ಳಿ ಎಂದು ಹೇಳುವ ಮೂಲಕ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಂತಹ ಪ್ರವೀಣ್‍ನನ್ನು ಕೊಲೆ ಮಾಡಿರುವುದು ಖಂಡನೀಯವಾಗಿದೆ. ಇದನ್ನು ಉಗ್ರವಾದ ಮಾತುಗಳಿಂದ ನಾವು ಖಂಡಿಸುತ್ತೇವೆ. ಈ ನೋವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ಕೃಷ್ಣನಲ್ಲಿ ಪ್ರಾರ್ಥಿಸುತ್ತೇವೆ ಎಂದರು.

ಇತ್ತೀಚೆಗೆ ಈ ತರಹದ ಕೊಲೆಗಳು ಹೆಚ್ಚಾಗಿ ರಾಜ್ಯದಲ್ಲಿ ನಡೆಯುತ್ತಿವೆ. ಇದರಿಂದಾಗಿ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಜನರು ಧಂಗೆ ಏಳುವ ಮೊದಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಜೊತೆಗೆ ಸರ್ಕಾರದ ಮೇಲೆ ಜನ ವಿಶ್ವಾಸ ಕಳೆದುಕೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಬೇಕು. ಸರ್ಕಾರವು ಘಟನೆಗೆ ಸಂಬಂಧಿಸಿದಂತೆ ತೀವ್ರವಾಗಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ