Breaking News

ನೇಜ್ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಗಣೇಶ ಹುಕ್ಕೇರಿ

Spread the love

ಅನ್ನಪೂರ್ಣೇಶ್ವರಿ ಏತ ನೀರಾವರಿ ಯೋಜನೆ ಮೂಲಕ ನೇಜ್ ಗ್ರಾಮದ ಕೆರೆಗೆ ನೀರು ತುಂಬಿದ ಹಿನ್ನೆಲೆಯಲ್ಲಿ ಶಾಸಕ ಗಣೇಶ ಹುಕ್ಕೇರಿ ಅವರು ಕೆರೆಗೆ ಗ್ರಾಮದ ಮುಖಂಡರೊಂದಿಗೆ ಸೇರಿ ಬಾಗಿನ ಅರ್ಪಿಸಿದರು.

ಕೃμÁ್ಣ ನದಿಯಿಂದ ನೀರನ್ನು ಏತ ನೀರಾವರಿ ಯೋಜನೆ ಮೂಲಕ ನೀರಾವರಿ ವಂಚಿತ ಅಚ್ಚುಕಟ್ಟು ಹೀರೆಕೊಡಿ, ನೇಜ, ನಾಗರಾಳ ಹಾಗೂ ಸುತ್ತ ಮುತ್ತಲಿನ 23 ಹಳ್ಳಿಗಳ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಸುಮಾರು 31218 ಎಕರೆ ಜಮೀನುಗಳಿಗೆ 139.55 ಕೋಟಿ ರೂ. ವೆಚ್ಚದ ಯೋಜನೆಯಾಗಿದೆ. ಹೀಗಾಗಿ ಕೆರೆ ತುಂಬಿರುವ ಹಿನ್ನೆಲೆಯಲ್ಲಿ ಶಾಸಕ ಗಣೇಶ ಹುಕ್ಕೇರಿ ಗಂಗಾ ಪೂಜೆ ನೆರವೇರಿಸಿ ಕೆರೆಗೆ ಬಾಗಿನ ಅರ್ಪಿಸಿದರು.

ಈ ವೇಳೆ ಮಾತನಾಡಿದ ಶಾಸಕ ಗಣೇಶ ಹುಕ್ಕೇರಿ ತುಂಬಿದ ಕೆರೆ ಕಟ್ಟೆಗಳಿಗೆ, ಹಳ್ಳಕೊಳ್ಳಗಳಿಗೆ, ತುಂಬಿ ಹರಿಯುವ ನದಿಗಳಿಗೆ ಕೃತಜ್ಞತಾ ಅರ್ಪಣಾ ಮನೋಭಾವದಿಂದ ಪೂಜೆ ಸಲ್ಲಿಸುವುದು ನಮ್ಮ ಭಾರತೀಯ ಸಂಸ್ಕøತಿಯಾಗಿದೆ. ಮನುಷ್ಯನ ಬದುಕಿನಲ್ಲಿ ಜೀವನಾಡಿಯಾಗಿರುವ ತುಂಬಿದ ಕೆರೆಗಳಿಗೆ ಬಾಗಿನ ಅರ್ಪಿಸಿದರೆ ಮುಂದಿನ ದಿನಮಾನಗಳಲ್ಲಿಯೂ ಕೆರೆಗಳು ನೀರಿನಿಂದ ತುಂಬಿರಲಿ ಎನ್ನುವ ಭಕ್ತಿ ಸಮರ್ಪಿಸಿದಂತಾಗಿದೆ ಎಂದರು.

ಬಳಿಕ ಗ್ರಾಮಸ್ಥರು ಮಾತನಾಡಿ ನೇಜ ಗ್ರಾಮವು ಬರ ಪೀಡಿತ ಮಡ್ಡಿಯಾಗಿದ್ದು ಈಗ ಅಭಿವೃದ್ಧಿ ಹರಿಕಾರ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ಅವರ ಪ್ರಯತ್ನದ ಫಲವಾಗಿ ಇಂದು ರೈತರ ಬಾಳು ಹಸನಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ