ಸುಳ್ಯ: ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಗುರುವಾರ ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಕುಟುಂಬಸ್ಥರಿಗೆ ಧೈರ್ಯ ತುಂಬಿದ ಸಿಎಂ, ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದ್ದು, ಅತೀ ಶೀಘ್ರದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು.
ಸರಕಾರ ಮತ್ತು ಬಿಜೆಪಿ ನಿಮ್ಮೊಂದಿಗೆ ಇರಲಿದೆ ಎಂದು ಧೈರ್ಯ ತುಂಬಿದರು.
25 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್ ಅನ್ನು ಸಿಎಂ ಕುಟುಂಬಸ್ಥರಿಗೆ ನೀಡಿರುವುದಾಗಿ ಸಿಎಂ ತಿಳಿಸಿದರು.
ನಿವಾಸದ ಸುತ್ತ ವ್ಯಾಪಕ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು. ಸಿಎಂ ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮುಂತಾದವರು ನಿವಾಸಕ್ಕೆ ಆಗಮಿಸಿದ್ದರು.