Breaking News
Home / ರಾಜಕೀಯ / ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಿದ ಸಿಎಂ; 25 ಲಕ್ಷ ರೂ. ಪರಿಹಾರ

ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಿದ ಸಿಎಂ; 25 ಲಕ್ಷ ರೂ. ಪರಿಹಾರ

Spread the love

ಸುಳ್ಯ: ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಗುರುವಾರ ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಕುಟುಂಬಸ್ಥರಿಗೆ ಧೈರ್ಯ ತುಂಬಿದ ಸಿಎಂ, ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದ್ದು, ಅತೀ ಶೀಘ್ರದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು.

ಸರಕಾರ ಮತ್ತು ಬಿಜೆಪಿ ನಿಮ್ಮೊಂದಿಗೆ ಇರಲಿದೆ ಎಂದು ಧೈರ್ಯ ತುಂಬಿದರು.

25 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್ ಅನ್ನು ಸಿಎಂ ಕುಟುಂಬಸ್ಥರಿಗೆ ನೀಡಿರುವುದಾಗಿ ಸಿಎಂ ತಿಳಿಸಿದರು.

ನಿವಾಸದ ಸುತ್ತ ವ್ಯಾಪಕ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು. ಸಿಎಂ ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮುಂತಾದವರು ನಿವಾಸಕ್ಕೆ ಆಗಮಿಸಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ