Breaking News

ಮಂಗಳೂರಿನ ಸುರತ್ಕಲ್ ನಲ್ಲಿ `ಫಾಜಿಲ್’ ಹತ್ಯೆ ಪ್ರಕರಣ : ಇಂದು ನಾಲ್ಕು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Spread the love

ಮಂಗಳೂರು : ಸುರತ್ಕಲ್ ನಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಸುರತ್ಕಲ್ ವ್ಯಾಪ್ತಿಯಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

 

ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಜಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು ನಾಲ್ಕು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸುರತ್ಕಲ್, ಪೆಣಂಬೂರು, ಬಜ್ಪೆ, ಮುಲ್ಕಿಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

 

ಫಾಜಿಲ್ ಸುರತ್ಕಲ್ ನ ಬಟ್ಟೆ ಖರೀದಿಗೆಂದು ಅಂಗಡಿಯೊಂದಕ್ಕೆ ತೆರಳಿದ್ದ ಈ ವೇಳೆ ರಾತ್ರಿ 8 ಗಂಟೆ ಸುಮಾರಿಗೆ ಈ ದಾಳಿ ಮಾಡಿ ದುಷ್ಕರ್ಮಿಗಳು ಫಾಜಿಲ್ ನನ್ನು ಹತ್ಯೆ ಮಾಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ