Breaking News

ಫಾಜಿಲ್ ಹತ್ಯೆಗೆ ನೇರ ಹೊಣೆ ಸಿಎಂ ಬೊಮ್ಮಾಯಿ: ಮುನೀರ್ ಕಾಟಿಪಳ್ಳ

Spread the love

ಮಂಗಳೂರು: ಮುಖ್ಯಮಂತ್ರಿ ಭೇಟಿಯ ಬೆನ್ನಲ್ಲೇ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಹತ್ಯೆಗೆ ನೇರ ಹೊಣೆ ಮುಖ್ಯಮಂತ್ರಿ ಬೊಮ್ಮಾಯಿ. ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾ ಭೇಟಿಯ ಸಂದರ್ಭ ತೋರಿದ ಸಾರ್ವಜನಿಕ‌ ಹೊಣೆಗೇಡಿತನವೇ ಕೊಲೆಗಡುಕರಿಗೆ ಧೈರ್ಯ ನೀಡಿದೆ‌ ಎಂದು ಡಿವೈಎಫ್‌ಐ ರಾಜ್ತ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

 

ಜಿಲ್ಲೆಯಲ್ಲಿ ನಡೆಯುತ್ತಿರುವ ಅಮಾಯಕರ ಸರಣಿ ಕೊಲೆಗಳಿಗೆ ಬೊಮ್ಮಾಯಿ ಸರ್ಕಾರವೇ ಕಾರಣ. ನಿರ್ಲಜ್ಜ ಕೋಮುವಾದಿ ಆಡಳಿತದ ಕರ್ನಾಟಕ ಮಾದರಿಯೊಂದನ್ನು ಬೊಮ್ಮಾಯಿ ನಿರ್ಮಿಸಿ ಬಿಟ್ಟರು. ಅವರಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಬಾರದು. ರಾಜಿನಾಮೆ ಕೊಟ್ಟು ನಿರ್ಗಮಿಸಲಿ ಎಂದು ಮುನೀರ್‌ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಲಪೇಟೆಯಲ್ಲಿ ನಡೆದ ಅಮಾನುಷ ಕೊಲೆಯನ್ನು ಖಂಡಿಸಿದ್ದಾರೆ. ಈ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ. ದುಷ್ಕೃತ್ಯ ನಡೆಸಿದವರನ್ನು ಬಂಧಿಸಿ, ಕಾನೂನಿನ ಕ್ರಮ ಜರುಗಿಸಲು, ಪೊಲೀಸರು ಪೂರ್ಣ ಸ್ವಾತಂತ್ರ್ಯ ಹೊಂದಿದ್ದು, ಜನತೆ ಶಾಂತಿಯಿಂದ ಸಹಕರಿಸಬೇಕು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ