Breaking News

ದುಷ್ಕರ್ಮಿಗಳು ಎಸ್‍ಪಿ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಅಕೌಂಟ್ ಸೃಷ್ಟಿ

Spread the love

ಉಡುಪಿ: ದುಷ್ಕರ್ಮಿಗಳು ಎಸ್‍ಪಿ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಅಕೌಂಟ್ ಸೃಷ್ಟಿ ಮಾಡಿದ್ದಾರೆ. ಕೋಸ್ಟ್ ಗಾರ್ಡ್ ಎಸ್‍ಪಿ ಚೇತನ್ ಕುಮಾರ್ ಹೆಸರಿನಲ್ಲಿ ಅಕೌಂಟ್ ತೆರೆದಿರುವ ಕಿಡಿಗೇಡಿಗಳು ದುಷ್ಕೃತ್ಯ ಎಸಗುವ ಹುನ್ನಾರ ಮಾಡಿದ್ದರು.

ಕೋಸ್ಟಲ್ ಎಸ್‍ಪಿ ಎಸ್‍ಪಿ ಸಿಂಗ್ ಹೆಸರಿನಲ್ಲಿ ಐಡಿ ಕ್ರಿಯೇಟ್ ಮಾಡಿ, ಚೇತನ್ ಕುಮಾರ್ ಅವರ ಫೋಟೋ ಬಳಸಲಾಗಿತ್ತು. ಇದಾಗಿ ಕೇವಲ ಅರ್ಧಗಂಟೆಯಲ್ಲಿ ದುಷ್ಕೃತ್ಯ ಬೆಳಕಿಗೆ ಬಂದಿದೆ. ಉಡುಪಿಯ ಮತ್ತು ಬೆಂಗಳೂರಿನ ಸೈಬರ್ ಕ್ರೈಂಗೆ ಎಸ್‍ಪಿ ಚೇತನ್ ಕುಮಾರ್ ದೂರು ನೀಡಿದ್ದಾರೆ.ನಕಲಿ ಅಕೌಂಟ್ ಕ್ರಿಯೆಟ್ ಮಾಡಿದ್ದು ಯಾರು?, ಇದರ ಹಿಂದಿನ ಉದ್ದೇಶ ಏನು? ಎಂಬ ಬಗ್ಗೆ ಪೊಲೀಸರು ಈಗಾಗಲೇ ತನಿಖೆಯನ್ನು ಶುರುಮಾಡಿದ್ದಾರೆ. ಎಸ್‍ಪಿ ಚೇತನ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಐಸೋಲೇಶನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ