Breaking News

ಅತ್ತೆ ಜೊತೆ ಅನೈತಿಕ ಸಂಬಂಧ ಶಂಕೆ: ಕತ್ತು ಕೊಯ್ದು ಯುವಕನ ಬರ್ಬರ ಹತ್ಯೆ

Spread the love

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ವೈನ್ ಸ್ಟೋರ್ ಬಳಿ ಕತ್ತು ಕೊಯ್ದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕೊಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಳಗೊಳದ ಸೀಬಯ್ಯನ ಮಂಟಿ ನಿವಾಸಿ ರವಿ(22) ಕೊಲೆಯಾದ ಯುವಕ. ಕೊಲೆಯಾದ ಯುವಕ ವೈನ್ಸ್ ಸ್ಟೋರ್ ನಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ರಾತ್ರಿ ಮಚ್ಚಿನಿಂದ ಕತ್ತು ಕೂಯ್ದು, ತಲೆ ಭಾಗಕ್ಕೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ.

ಶರತ್ ಕೊಲೆ ಮಾಡಿರುವ ಆರೋಪಿ. ಶರತ್​ನ ಅತ್ತೆಯ ಜೊತೆ ರವಿ ಅಕ್ರಮ ಸಂಬಂಧ ಹೊಂದಿದ್ದ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿಯೇ ಈ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಕೆ.ಆರ್.ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ