ಬೆಂಗಳೂರು: ರಾಜ್ಯದಲ್ಲಿರುವಂತ ಬಾರ್, ಮಧ್ಯದಂಗಡಿ ಮತ್ತು ಪಬ್ ಗಳಲ್ಲಿ ಕೈಗೊಳ್ಳಬೇಕಾದಂತ ಕ್ರಮಗಳ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆಯೂ ಸೂಚಿಸಲಾಗಿದೆ.
ಈ ಸಂಬಂಧ ರಾಜ್ಯದ ಡಿಜಿಪಿ ಮತ್ತು ಐಜಿಪಿ ಅಲೋಕ್ ಕುಮಾರ್ ಅವರು ಬೆಂಗಳೂರು ನಗರದ ಪೊಲೀಸ್ ಆಯುಕ್ತರಿಗೆ, ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರದಲ್ಲಿ ಸೂಚಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆಯ ಡಿಐಜಿ ಮತ್ತು ಐಜಿಪಿ ಹೊರಡಿಸಿರುವಂತ ಆದೇಶದಲ್ಲಿ ಬಾರ್, ಪಬ್ ಮತ್ತು ಮಧ್ಯದ ಅಂಗಡಿಗಳಿಗೆ ಅಪ್ರಾಪ್ತ ವಯಸ್ಕರು ಪ್ರವೇಶ ನೀಡದಂತೆ ಕಟ್ಟು ನಿಟ್ಟಿನ ಕ್ರಮವನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಇನ್ನು ಬಾರ್, ಪಬ್ ಮತ್ತು ಮಧ್ಯದಂಗಡಿಗಳಲ್ಲಿ ಮಾದಕ ದ್ರವ್ಯಗಳ ಸಾಗಾಣಿಕೆ ಮತ್ತು ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕರ್ಮ ಕೈಗೊಳ್ಳಬೇಕು. ನಿಗಧಿತ ಸಮಯದಲ್ಲಿ ಕಡ್ಡಾಯವಾಗಿ ಅಂಗಡಿಗಳನ್ನು ಮುಚ್ಚುವಂತೆ ಕ್ರಮ ಜರುಗಿಸಬೇಕು. ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಪಬ್ ಗಳಲ್ಲಿ ಅಳವಡಿಸಲಾಗಿರುವ ಧ್ವನಿ ವರ್ಧಕಗಳನ್ನು ರಾತ್ರಿ 10 ಗಂಟೆಯೊಳಗೆ ನಿಲ್ಲಿಸಿ, ಶಬ್ದ ಮಾಲೀನ್ಯ ಉಂಟಾಗದಂತೆ ಕ್ರಮ ಜರುಗಿಸುವಂತೆ ತಿಳಿಸಿದ್ದಾರೆ.