Breaking News

20 ರೂಪಾಯಿ ಕೊಟ್ಟು ಧ್ವಜ ಖರೀದಿಸಿ ಮನೆಯ ಮೇಲೆ ಹಾರಿಸಿ: ಜೋಶಿ

Spread the love

ಹುಬ್ಬಳ್ಳಿ: 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಒಂದು ಧ್ವಜಕ್ಕೆ 20 ರೂ. ಕೊಟ್ಟು‌ ಸಾರ್ವಜನಿಕರು ಖರೀದಿ ಮಾಡಬೇಕು. ಆಗಸ್ಟ್ 13ರಿಂದ 15ರವರೆಗೆ ಧ್ವಜವನ್ನು ಮನೆಗಳ ಮೇಲೆ ಹಾರಿಸಬಹುದು. ನ್ಯಾಯಬೆಲೆ ಅಂಗಡಿ, ಮಾಲ್, ಮಹಾನಗರ ಪಾಲಿಕೆಗೆ ಸಂಬಂಧಪಟ್ಟ ಕಚೇರಿಗಳಲ್ಲಿ ಧ್ವಜಗಳು ದೊರೆಯುತ್ತವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ನಗರದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ನಮಗೆ ಹತ್ತು ಕೋಟಿ ಧ್ವಜ ಬೇಕು. ಅದನ್ನು ಪೂರೈಕೆ ಮಾಡೋಕೆ ಆಗೋದಿಲ್ಲ. ಖಾದಿ ಧ್ವಜಕ್ಕೆ ಹೆಚ್ಚು ದುಡ್ಡು ಕೊಡಬೇಕು. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇದರಿಂದ ಧ್ವಜದ ಸಂಹಿತೆಗೆ ತಿದ್ದುಪಡಿ ತರಲಾಗಿದೆ ಎಂದರು.

ರಾಷ್ಟ್ರೀಯ ಧ್ವಜದ ಸಂಹಿತೆ ತಿದ್ದುಪಡಿ ವಿಚಾರದಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ. ರಾಹುಲ್ ಗಾಂಧಿ ಬರುವ ಬಗ್ಗೆ ಹೆಚ್ಚು ನಾನು ಮಾತನಾಡುವುದಿಲ್ಲ ಎಂದ ಅವರು, ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಕೂಡಲೇ ಅಧಿಕಾರಿಗಳು ಸ್ಪಂದಿಸಬೇಕು. ಯಾವುದೇ ಕಾರಣಗಳನ್ನು ನೀಡಿ ಜನರಿಗೆ ಸಮಸ್ಯೆ ಉಂಟು ಮಾಡುವ ಕೆಲಸವನ್ನು ಆಗಬಾರದು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ