Breaking News

ದೇಶದಲ್ಲಿ ಸಂಪೂರ್ಣವಾಗಿ ಹಿಂದೂ ರಾಷ್ಟ್ರದ ವಿರುದ್ಧ ಇಸ್ಲಾಮೀಕರಣ ಮಾಡುವ ಹುನ್ನಾರ: ಲಕ್ಷ್ಮಣ ಸವದಿ

Spread the love

ದೇಶದಲ್ಲಿ ಸಂಪೂರ್ಣವಾಗಿ ಹಿಂದೂ ರಾಷ್ಟ್ರದ ವಿರುದ್ಧವಾಗಿ ಇಸ್ಲಾಮೀಕರಣ ಮಾಡುವ ಹುನ್ನಾರ ನಡೆಯುತ್ತಿದೆ ಹೀಗಾಗಿ ಸರಣಿ ಕೊಲೆಗಳು ನಡೆಯುತ್ತಿವೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗಂಭೀರ ಆರೋಪ ಮಾಡಿದ್ದಾರೆ.

ಅಥಣಿ ತಾಲೂಕಿನ ರಡ್ಡೆರಹಟ್ಟಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಎಂಎಲ್‍ಸಿ ಲಕ್ಷ್ಮಣ ಸವದಿ ಬಿಜೆಪಿ ಕಾರ್ಯಕರ್ತರ ಕೊಲೆ ಖಂಡನೀಯವಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಯಾರೇ ಆಗಲಿ ಸಮಾಜ ವಿರೋಧಿ ಕೃತ್ಯಗಳಲ್ಲಿ ಭಾಗಿಯಾದರೆ ಸರ್ಕಾರ ಸಹಿಸಲ್ಲ ಉಗ್ರ ಕಾನೂನು ತಂದು ಶಿಕ್ಷಿಸಲಾಗುವುದು ಎಂದು ಎಚ್ಚರಿಸಿದರು. ಅಲ್ಲದೇ ಈ ರೀತಿಯ ಸಮಾಜಘಾತುಕ ಶಕ್ತಿಗಳನ್ನು ನಿಗ್ರಹಿಸಿ ಮಟ್ಟಹಾಕಲು ಕಾನೂನಿನಲ್ಲಿ ಮಹತ್ತರ ಬದಲಾವಣೆ ತರುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸಿಎಂ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಮುಂಬರುವ ವಿಧಾನಸಭೆಯ ಅಧಿವೇಶನದಲ್ಲಿ ಕಾನೂನು ತಿದ್ದುಪಡಿ ವಿಧೇಯಕವನ್ನು ಮಂಡಿಸುವ ಚಿಂತನೆ ನಡೆದಿದೆ ಎಂದರು.

ಇನ್ನೂ ರಾಜ್ಯದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ ಬಗ್ಗೆ ಮಾತನಾಡಿದ ಲಕ್ಷ್ಮಣ ಸವದಿ ಸಹಜವಾಗಿ ಕಾರ್ಯಕರ್ತರ ಮನಸ್ಸಿಗೆ ನೋವಾಗಿರುತ್ತದೆ ಅವರ ರಾಜೀನಾಮೆಯ ಉದ್ದೇಶ ಕೇವಲ ಸರ್ಕಾರವನ್ನು ಎಚ್ಚರಿಸುವುದಾಗಿದೆ.  ಬದಲಾಗಿ ಬೇರೆನೂ ಇಲ್ಲ ಕಾರ್ಯಕರ್ತರೆಲ್ಲ ಕುಟುಂಬದ ಸದಸ್ಯರಿದ್ದಂತೆ ಎಂದು ಸಮರ್ಥಿಸಿಕೊಂಡರು.

 


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ