Breaking News

ಡಿಸೆಂಬರ್‌ನಲ್ಲೇ ವಿಧಾನಸಭೆ ಚುನಾವಣೆ: H.D.K.

Spread the love

ಬೀದರ್: ಇಂದಿನ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಿದರೆ ರಾಜ್ಯದಲ್ಲಿ ಡಿಸೆಂಬರ್‌ನಲ್ಲೇ ವಿಧಾನಸಭೆ ಚುನಾವಣೆ ನಡೆಯುವ ಲಕ್ಷಣಗಳು ಕಂಡು ಬರುತ್ತಿವೆ. ಹೀಗಾಗಿ ಮೊದಲ ಹಂತದಲ್ಲಿ ಜೆಡಿಎಸ್‌ ಗೆಲ್ಲಲು ಸಾಧ್ಯವಿರುವ 134 ಕ್ಷೇತ್ರಗಳಲ್ಲಿ ಸಿದ್ಧತೆ ಆರಂಭಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

 

ಬೀದರ್‌ ಜಿಲ್ಲಾ ಮಟ್ಟದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಹೊಣೆಯನ್ನು ಜೆಡಿಎಸ್‌ ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ ಅವರಿಗೆ ವಹಿಸಲಾಗಿದೆ. 10, 12 ದಿನಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ನಗರದಲ್ಲಿ ಶನಿವಾರ ಮಾಧ್ಯಮ ಗೋಷ್ಠಿಯಲ್ಲಿ ಅವರು ತಿಳಿಸಿದರು.

ಕಲಬುರಗಿ ಹಾಗೂ ರಾಯಚೂರು ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಆಗಲೇ ಪಕ್ಷ ಸಂಘಟನೆ ಕಾರ್ಯ ಶುರುವಾಗಿದೆ. ಕೊಪ್ಪಳ ಹಾಗೂ ಬಳ್ಳಾರಿಯಲ್ಲಿ ದೊಡ್ಡ ಮಟ್ಟದ ಸಂಘಟನೆಯಗಬೇಕಿದೆ. ಈ ದಿಸೆಯಲ್ಲಿ ಪ್ರಯತ್ನ ನಡೆದಿದೆ ಎಂದು ಹೇಳಿದರು.

ಆಗಸ್ಟ್‌ನಿಂದ ರಾಜ್ಯದ 134 ಕ್ಷೇತ್ರಗಳಲ್ಲಿ ಪಂಚಶೀಲರತ್ನ ಯಾತ್ರೆ ಆರಂಭವಾಗಲಿದೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಸಣ್ಣ ಹಾಗೂ ದೊಡ್ಡ ಮಟ್ಟದ 14ರಿಂದ 18 ಸಭೆಗಳು ನಡೆಯಲಿವೆ. ಪಂಚಾಯಿತಿ ಮಟ್ಟದಲ್ಲೂ ಸಭೆ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳು ನಡೆಯಲಿದೆ ಎಂದರು.

ಶಿಕ್ಷಣ, ಆರೋಗ್ಯ, ರೈತರು ಆರ್ಥಿಕವಾಗಿ ಸದೃಢರಾಗುವ ಅವಕಾಶ, ಮಹಿಳೆ, ಯುವಕರಿಗೆ ಉದ್ಯೋಗ ಅವಕಾಶ ಹಾಗೂ ಬಡವರ ವಸತಿ ನಿರ್ಮಾಣದ ಬಗ್ಗೆ ಕಾರ್ಯಕ್ರಮ ರೂಪಿಸಲಾಗಿದ್ದು, ಇವುಗಳನ್ನು ಅನುಷ್ಠಾನಗೊಳಿಸಲು ರಾಜ್ಯದ ಜನತೆ ಜೆಡಿಎಸ್‌ಗೆ ಅಧಿಕಾರ ನೀಡಬೇಕು ಎಂದು ಮನವಿ ಮಾಡಿದರು.

ರಾಷ್ಟ್ರೀಯ ಪಕ್ಷಗಳು 100ರಿಂ 150 ವರ್ಷ ಕಳೆದರೂ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದಿಲ್ಲ. ಆದರೆ, ಜೆಡಿಎಸ್‌ ಐದು ವರ್ಷಗಳಲ್ಲೇ ಯೋಜನೆ ಪೂರ್ಣಗೊಳಿಸುವ ಯೋಜನೆ ರೂಪಿಸಿದೆ. ಆರ್ಥಿಕ ತಜ್ಞರ ಕೃತಿ ಹಾಗೂ ಲೇಖನಗಳನ್ನು ಓದಿ ವಸ್ತುಸ್ಥಿತಿಯನ್ನು ಆಳವಾಗಿ ಅರಿತುಕೊಂಡಿದ್ದೇನೆ ಎಂದರು.


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ