Breaking News

2ಎ ಮೀಸಲಾತಿಗೆ ಧರಣಿ: ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಎಚ್ಚರಿಕೆ

Spread the love

ಹುಬ್ಬಳ್ಳಿ: ‘ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಆಗಸ್ಟ್‌ 22ರ ಒಳಗೆ 2(ಎ) ಮೀಸಲಾತಿ ಕಲ್ಪಿಸಬೇಕು. ಇಲ್ಲದಿದ್ದರೆ ಆಗಸ್ಟ್‌ 23ರಂದು ಶಿಗ್ಗಾವಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಪಂಚ ಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಎಚ್ಚರಿಸಿದರು.

 

ಲಿಂಗಾಯತ ಪಂಚಮಸಾಲಿ ಸಮಾಜ ದಿಂದ ಶನಿವಾರ ಹುಬ್ಬಳ್ಳಿಯಲ್ಲಿ ನಡೆದ ಹಕ್ಕೊತ್ತಾಯ ರ‍್ಯಾಲಿ ಮತ್ತು ಧರಣಿಯಲ್ಲಿ ಅವರು ಮಾತನಾಡಿದರು.

‘ಮೀಸಲಾತಿ ಕಲ್ಪಿಸಿದರೆ ಮುಖ್ಯಮಂತ್ರಿಗೆ ಸನ್ಮಾನ ಮಾಡಲಾಗುವುದು. ಇಲ್ಲದಿದ್ದರೆ ಅವಮಾನ ಮಾಡಲೂ ಹಿಂಜರಿಯುವುದಿಲ್ಲ. ಇದು ಕೊನೆಯ ಹಂತದ ಮಾಡು ಇಲ್ಲವೆ ಮಡಿ ಹೋರಾಟ’ ಎಂದರು. ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ‘ಪಂಚಮಸಾಲಿ ಸಮಾಜದ ಬೆಂಬಲ ಇಲ್ಲದೆ ಯಾವ ಪಕ್ಷಗಳೂ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಮೀಸಲಾತಿ ಕಲ್ಪಿಸುವವರಿಗೆ 2023ರ ಚುನಾವಣೆಯಲ್ಲಿ ನಮ್ಮ ಸಹಕಾರ ಇರುತ್ತದೆ’ ಎಂದು ಹೇಳಿದರು.

‘ಮುಖ್ಯಮಂತ್ರಿ ಅವರು ಕೊಟ್ಟ ಮಾತು ಉಳಿಸಿಕೊಳ್ಳುವ ವಿಶ್ವಾಸವಿದೆ. ಮೀಸಲಾತಿ ನೀಡಿದರೆ ಅವರಿಗೆ ಕಲ್ಲುಸಕ್ಕರೆಯ ತುಲಾಭಾರ ಮಾಡಲಾ ಗುವುದು. ಮಾತು ತಪ್ಪಿದರೆ ಉಗ್ರ ಹೋರಾಟ ಎದುರಿಸಬೇಕಾ
ಗುತ್ತದೆ’ ಎಂದು ಎಚ್ಚರಿಸಿದರು.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ