Breaking News

ಸಾರಿಗೆ ಇಲಾಖೆಯಲ್ಲಿ ಚಾಲಕರ ನೇಮಕ, ₹ 30 ಸಾವಿರ ವೇತನ: ಸಚಿವ ಶ್ರೀರಾಮುಲು

Spread the love

ಬಳ್ಳಾರಿ: ಸಾರಿಗೆ ಇಲಾಖೆಯಲ್ಲಿ ಚಾಲಕರ ಕೊರತೆ ಹಿನ್ನೆಲೆ ನಿವೃತ್ತಿ ಆಗಿರುವ ಚಾಲಕರನ್ನ ಹೊರಗುತ್ತಿಗೆ ಮೂಲಕ ಫಿಜಿಕಲ್ ಫಿಟ್ನೆಸ್ ಇರುವವರನ್ನ ಪುನ: ನೇಮಕ ಮಾಡಲಾಗುವುದೆಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಾಲಕರ ಕೊರತೆ ಇದೆ. 2006-07 ರಲ್ಲಿ ನಿವೃತ್ತಿ ಆಗಿರುವ ಚಾಲಕರನ್ನ ಹೊರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲಾಗಿತ್ತು. ಪ್ರತಿ ತಿಂಗಳಿಗೆ 30 ಸಾವಿರ ರೂಪಾಯಿ ವೇತನ ನೀಡಲಾಗುವುದು. ಹೊಸ ಚಾಲಕರ ನೇಮಕಾತಿಗೆ ಹೆಚ್ಚು ಸಮಯ ಬೇಕಾಗುತ್ತದೆ. ಹೀಗಾಗಿ, ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ವೇತನ ಪರಿಷ್ಕರಣೆ ಸಂಬಂಧ ಸಿಎಂ ಜೊತೆ ಚರ್ಚೆ ನಡೆಸುವುದಾಗಿ ತಿಳಿಸಿದರು. ಬಿಎಂಟಿಸಿಯನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡುವ ಉದ್ದೇಶ ಇಲ್ಲ. ಆದರೆ, ಖಾಸಗೀಕರಣ ಮಾಡುವಂತೆ ಅನೇಕ ದಿನಗಳ ಬೇಡಿಕೆ ಇದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ