Breaking News

ಬುಲೆಟ್ ಪ್ರೂಫ್ ಕಾರು ಖರೀದಿಸಿದ ಬಾಲಿವುಡ್ ನಟ ಸಲ್ಮಾನ್ ಖಾನ್

Spread the love

ಬಾಲಿವುಡ್ ನಟ ಸಲ್ಮಾನ್ ಖಾನ್ ನಿತ್ಯವೂ ಭಯದಿಂದಲೇ ಬದುಕುತ್ತಿದ್ದಾರಂತೆ. ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಟೀಮ್ ಜೀವ ಬೆದರಿಕೆಯ ಹಿನ್ನೆಲೆಯಲ್ಲಿ ಅವರಿಗೆ ಸ್ವತಂತ್ರವಾಗಿ ಓಡಾಡಲು ಕಷ್ಟವಾಗುತ್ತಿದೆಯಂತೆ.

ಜೀವ ಬೆದರಿಕೆ ಪತ್ರಗಳು, ಮಸೇಜ್ ಗಳಿಂದ ಕಿರಿಕಿರಿ ಅನುಭವಿಸುತ್ತಿರುವ ಸಲ್ಮಾನ್ ಖಾನ್ ಮೊನ್ನೆಯಷ್ಟೇ ಮುಂಬೈ ಪೊಲೀಸ್ ಕಮಿಷ್ನರ್ ಭೇಟಿ ಮಾಡಿ, ಗನ್ ಇಟ್ಟುಕೊಳ್ಳಲು ಅನುಮತಿ ಕೊಡಿ ಎಂದು ಮನವಿ ಮಾಡಿದ್ದರು.

ಅಲ್ಲದೇ, ಸಲ್ಮಾನ್ ಖಾನ್ ಮನೆಗೆ ಬಿಗಿಭದ್ರತೆಯನ್ನು ಗೃಹ ಇಲಾಖೆ ಆಯೋಜನೆ ಮಾಡಿದೆ, ಅಲ್ಲದೇ, ಸಲ್ಮಾನ್ ಗೆ ಸಾರ್ವಜನಿಕ ಸಮಾರಂಭಗಳಲ್ಲಿ ಭಾಗಿಯಾಗದಂತೆ ಮತ್ತು ಅತೀ ಹೆಚ್ಚು ಜನಸಂದಣಿ ಇರುವ ಕಡೆ ಓಡಾಡದಿರಲು ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತದೆ. ಶೂಟಿಂಗ್ ಗೆ ಹೋಗುವುದು ಅನಿವಾರ್ಯ ಆಗಿರುವುದರಿಂದ ಬುಲೆಟ್ ಪ್ರೂಫ್ ಕಾರು ಖರೀದಿಸಿದ್ದಾರಂತೆ ಸಲ್ಮಾನ್ ಖಾನ್.  


Spread the love

About Laxminews 24x7

Check Also

ಡಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಯಾದವಾಡ ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ 16 ಲಕ್ಷ ರೂ. ಮತ್ತು ಕುಲಗೋಡ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ 10 ಲಕ್ಷ ರೂಪಾಯಿ ದೇಣಿಗೆ*

Spread the love *ಡಾಲ್ಮಿಯಾ ಸಿಮೆಂಟ್ ಭಾರತ ಲಿ.., ಸಮಾಜಮುಖಿ ಕಾರ್ಯಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಫೀದಾ* *ಮೂಡಲಗಿ*- ಸಿಮೆಂಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ