Breaking News

ಬೆಳಗಾವಿ ಜಿಲ್ಲೆ ಗಡಿ ಭಾಗದ ಸರ್ಕಾರಿ ಶಾಲೆಯಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆ

Spread the love

ಚಿಕ್ಕೋಡಿ: ಕರ್ನಾಟಕ, ಮಹಾರಾಷ್ಟ್ರ ಗಡಿ ಭಾಗದ ಸರ್ಕಾರಿ ಶಾಲೆಯಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿರುವುದು ಆತಂಕ ಮೂಡಿಸಿದೆ.

ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಶಂಕೆ ಹಿನ್ನೆಲೆಯಲ್ಲಿ ಕರ್ನಾಟಕ, ಮಹಾರಾಷ್ಟ್ರ ಸೇರಿ 6 ರಾಜ್ಯಗಳ 13 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಭಾನುವಾರ ಪರಿಶೀಲನೆ ನಡೆಸಿದ ಬೆನ್ನಲ್ಲೇ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಕುಡನೂರು ಗ್ರಾಮದ ಮರಾಠಿ ಶಾಲೆಯಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ.

ಮಕ್ಕಳು ಬಾಂಬ್ ಎಂದು ತಿಳಿಯದೇ ಗ್ರೆನೇಡ್‍ನೊಂದಿಗೆ ಆಟ ಆಡುತ್ತಿದ್ದದ್ದನ್ನು ಕಂಡು ಶಿಕ್ಷಕರು ಹಾಗೂ ಗ್ರಾಮಸ್ಥರು ಗಾಬರಿಗೊಂಡು ಪೊಲೀಸರಿಗೆ ಕರೆ ಮಾಡಿದ್ದಾರೆ. ತಕ್ಷಣ ಸಾಂಗ್ಲಿ ಪೊಲೀಸರು, ಬಾಂಬ್ ನಿಷ್ಕ್ರೀಯ ದಳದೊಂದಿಗೆ ಗ್ರಾಮಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಭಾರಿ ಅನಾಹುತ ತಪ್ಪಿದೆ. ಶಾಲೆಯಲ್ಲಿ ಪತ್ತೆಯಾಗಿರುವ ಹ್ಯಾಂಡ್ ಗ್ರೆನೇಡ್ ಮೇಲೆ ಉರ್ದು ಭಾಷೆಯ ಲಿಪಿ ಕಂಡುಬಂದಿದೆ. ಗ್ರೆನೇಡ್ ಜೀವಂತವಾಗಿತ್ತೇ ಅಥವಾ ನಿಷ್ಕ್ರೀಯವಾಗಿತ್ತೇ ಎನ್ನುವ ಕುರಿತು ತನಿಖೆ ನಡೆಯುತ್ತಿದೆ. 


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ