Breaking News

ಮಹಾರಾಷ್ಟ್ರ ಮತ್ತು ಕರ್ನಾಟಕದಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ್

Spread the love

ಚಿಕ್ಕೋಡಿ: ಮಹಾರಾಷ್ಟ್ರ ಮತ್ತು ಕರ್ನಾಟಕದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ಅವರಿಂದ 24 ಲಕ್ಷ ರೂ. ಮೌಲ್ಯದ 41ಬೈಕ್​ಗಳನ್ನು ನಿಪ್ಪಾಣಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ನಾಲ್ವರು ಆರೋಪಿಗಳು ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಕಳ್ಳತನ ವೃತ್ತಿಗೆ ಇಳಿದಿದ್ದರು. ಬೈಕ್ ಕಳ್ಳತನವಾಗಿರುವ ಬಗ್ಗೆ ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ‌ಕೇಸ್​ ದಾಖಲಿಸಿಕೊಂಡ ಪೊಲೀಸರು, ಸಿಪಿಐ ಸಂಗಮೇಶ ಶಿವಯೋಗಿ ನೇತೃತ್ವದ ತಂಡ ರಚಿಸಿ ಆರೋಪಿಗಳ ಪತ್ತೆಗೆ ಬಲೆಬೀಸಿದ್ದರು.

ಪೊಲೀಸ್​ ಕಾರ್ಯಾಚರಣೆ ವೇಳೆ ಓರ್ವ ಆರೋಪಿಯನ್ನ ನಿಪ್ಪಾಣಿ ತಾಲೂಕಿನ ಅಪ್ಪಚಿವಾಡಿ ಗ್ರಾಮದಲ್ಲಿ ಬಂಧಿಸಲಾಗಿತ್ತು.‌ ಇದಾದ ಬಳಿಕ ಆತನನ್ನ ತೀವ್ರ ವಿಚಾರಣೆ ನಡೆಸಿದಾಗ ನಾಲ್ವರು ಕೂಡಿಕೊಂಡು ಕಳ್ಳತನ ಮಾಡುತ್ತಿರುವುದಾಗಿ ಮಾಹಿತಿ ನೀಡಿದ್ದ. ಇದೀಗ ನಾಲ್ವರೂ ಆರೋಪಿಗಳನ್ನ ಬಂಧಿಸಲಾಗಿದ್ದು, ಅವರಿಂದ 24ಲಕ್ಷ ರೂ.ಗಳ ಮೌಲ್ಯದ 41ಬೈಕ್ ವಶಪಡಿಸಿಕೊಳ್ಳಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ