ಮತ್ತೆ 150ಕ್ಕೂ ಹೆಚ್ಚು ಸ್ಥಾನವನ್ನು ಪಡೆದು ಅಧಿಕಾರಕ್ಕೆ ಬರುತ್ತೇವೆ ಎನ್ನುವ ರಾಜ್ಯ ಬಿಜೆಪಿ ನಾಯಕರ ವಿಶ್ವಾಸದ ಮಾತಿಗೆ ಪಕ್ಷದ ಕಾರ್ಯಕರ್ತರಿಬ್ಬರ ಕಗ್ಗೊಲೆ ಅಡ್ಡಿಯಾಗುವ ಸಾಧ್ಯತೆಯಿದೆಯೇ?. ಯಾಕೆ ಬಿಜೆಪಿ ನಾಯಕರು ಕಾರ್ಯಕರ್ತರನ್ನು ಎದುರಿಸಲು ಹಿಂದೇಟು ಹಾಕುತ್ತಿದ್ದಾರೆ?.
ಶಿವಮೊಗ್ಗದದಲ್ಲಿ ಹರ್ಷನ ಕೊಲೆಯ ನಂತರ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಬಿಜೆಪಿ ಸರಕಾರವಿದ್ದರೂ ಏನು ಪ್ರಯೋಜನ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದಾದ ನಂತರ, ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಘಟಕದ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪಕ್ಷಕ್ಕೆ ತೀವ್ರ ಹಿನ್ನಡೆಯನ್ನು ತಂದೊಡ್ಡಿದೆ.
ಅಕ್ಷರಶಃ ಪಕ್ಷದ ಕೆಲವು ಮುಖಂಡರು ಮತ್ತು ಕಾರ್ಯಕರ್ತರು ತಮ್ಮದೇ ಪಕ್ಷದ ನಾಯಕರ ವಿರುದ್ದ ತಿರುಗಿ ಬೀಳುತ್ತಿದ್ದಾರೆ. ಈ ರೀತಿಯ ಸನ್ನಿವೇಶ ಎದುರಾಗಬಹುದು? ಎನ್ನುವ ಯಾವ ನಿರೀಕ್ಷೆಯಲ್ಲೂ ಇರದ ಬಿಜೆಪಿ ನಾಯಕರು ಕಕ್ಕಾಬಿಕ್ಕಿಯಾಗಿದ್ದಾರೆ.
ಕಾರ್ಯಕರ್ತರೇ ಪಕ್ಷದ ಬೇರು ಎಂದು ಹೇಳಿಕೊಂಡು ಬರುತ್ತಿದ್ದ ನಾಯಕರಿಗೆ ಕಾರ್ಯಕರ್ತರ ಪ್ರಶ್ನೆಗೆ ಉತ್ತರ ಕೊಡಲು ಸಾಧ್ಯವಾಗುತ್ತಿಲ್ಲ. ಜಿಲ್ಲಾ ಮಟ್ಟದಲ್ಲಿ ಮುಖಂಡರ ಸಾಮೂಹಿಕ ರಾಜೀನಾಮೆ ವರಿಷ್ಠರ ನಿದ್ದೆಗೆಡಿಸಿದೆ.