ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್‌ನಿಂದ ಎಸ್.ಆರ್. ಪಾಟೀಲ್ ಸೂಕ್ತ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ.
ರಾಜ್ಯದಲ್ಲಿ ಮುಂದಿನ ವರ್ಷ ಆರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ಈ ಹೊತ್ತಿನಲ್ಲಿ ಮುಖ್ಯಮಂತ್ರಿ ಗದ್ದುಗೆ ಏರುವ ವಿಷಯದಲ್ಲಿ ಕಾಂಗ್ರೆಸ್‌ನಲ್ಲಿ ಇಬ್ಬರ ಮಧ್ಯೆ ಪೈಪೋಟಿ ಎದ್ದಿದೆ ಎಂದುಕೊಳ್ಳುತ್ತಿರುವಾಗಲೇ, ಹಿರಿಯ ನಾಯಕರೊಬ್ಬರ ಹೆಸರು ಇದೀಗ ಮುನ್ನೆಲೆಗೆ ಬಂದಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಗೊಂದಲದಲ್ಲಿ ಸಿಲುಕಿರುವಂತಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್‌ನಿಂದ ಎಸ್.ಆರ್. ಪಾಟೀಲ್ ಸೂಕ್ತ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಭಾನುವಾರ ಹೇಳಿದ್ದಾರೆ.
ಒಕ್ಕಲಿಗ ಸಮುದಾಯಕ್ಕೆ ಸಿಎಂ ಆಗುವ ಅವಕಾಶ ಬಂದಿದೆ. ಎಸ್.ಎಂ.ಕೃಷ್ಣ ನಂತರ ಸಿಎಂ ಆಗುವ ಅವಕಾಶ ಬಂದಿದ್ದು, ಅದನ್ನು ಮಿಸ್ ಮಾಡಿಕೊಳ್ಳಬೇಡಿ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಬೆನ್ನಲ್ಲೇ ರಾಜ್ಯದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಎಸ್.ಆರ್. ಪಾಟೀಲ್ ಅವರನ್ನ ಎಳೆದು ತಂದಿದ್ದಾರೆ.