Home / ರಾಜಕೀಯ / ಸಂಜಯ ರಾವುತ್‌ರನ್ನು ಮುಂಬೈ ನ್ಯಾಯಾಲಯಕ್ಕೆ ಕರೆತಂದ ಇ.ಡಿ ಅಧಿಕಾರಿಗಳು

ಸಂಜಯ ರಾವುತ್‌ರನ್ನು ಮುಂಬೈ ನ್ಯಾಯಾಲಯಕ್ಕೆ ಕರೆತಂದ ಇ.ಡಿ ಅಧಿಕಾರಿಗಳು

Spread the love

ಮುಂಬೈ: ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ನಾಯಕ ಸಂಜಯ್‌ ರಾವುತ್‌ ಅವರ ವಿಚಾರಣೆಯು ಮುಂಬೈ ನ್ಯಾಯಾಲಯದಲ್ಲಿ ಸೋಮವಾರ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು(ಇ.ಡಿ) ರಾವುತ್‌ ಅವರನ್ನು ನ್ಯಾಯಾಲಯಕ್ಕೆ ಕರೆತಂದಿದೆ.

ಭೂ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಸಂಜಯ್‌ ನಿವಾಸದಲ್ಲಿ ಭಾನುವಾರ ಬೆಳಿಗ್ಗೆ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಆ ನಂತರ ಅವರನ್ನು ವಶಕ್ಕೆ ಪಡೆದಿದ್ದರು.

ಇದೇ ವೇಳೆ, ರಾವುತ್‌ ಮನೆಗೆ ಭೇಟಿ ನೀಡಿರುವ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್‌ ಠಾಕ್ರೆ ಅವರು ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದ್ದಾರೆ.

ಮೂಲಗಳ ಪ್ರಕಾರ, ರಾವುತ್‌ ನಿವಾಸದಿಂದ ₹11.50 ಲಕ್ಷ ಅಕ್ರಮ ನಗದು ಹಣವನ್ನು ಇ.ಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

₹1,034 ಕೋಟಿ ಮೊತ್ತದ ಪತ್ರಾ ಚಾಲ್‌ ಭೂ ಹಗರಣದ ಸುಳಿಯಲ್ಲಿ ರಾವುತ್, ಅವರ ಪತ್ನಿ ಹಾಗೂ ಸ್ನೇಹಿತ ಶಾಮೀಲಾಗಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಮುಂಬೈ ಹೊಟೇಲ್ ಉದ್ಯಮಿ ಕೊಲೆ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ

Spread the love ಮುಂಬೈ: 2001ರಲ್ಲಿ ಮುಂಬೈನ ಹೊಟೇಲ್ ಉದ್ಯಮಿ ಜಯಾ ಶೆಟ್ಟಿ ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್ ಛೋಟಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ