Breaking News

ಕೊಪ್ಪಳದ ಅಂಜನಾದ್ರಿಯೇ ಹನುಮನ ಜನ್ಮಸ್ಥಳ: ಸಿಎಂ ಬಿಎಸ್ ಬೊಮ್ಮಾಯಿ

Spread the love

ಕೊಪ್ಪಳ: ಕೊಪ್ಪಳದ ಅಂಜನಾದ್ರಿಯೇ ಹನುಮನ ಜನ್ಮ ಸ್ಥಳ. ಇದನ್ನು ಸಾವಿರ ಸಾವಿರ ಸಾರಿ ಒತ್ತಿ ಹೇಳುವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ನಮ್ಮೆಲ್ಲರ ಆರಾದ್ಯ ದೈವ ಅಂಜನಾದ್ರಿಯ ಹನುಮಂತನ ದರ್ಶನಕ್ಕೆ ಆಗಮಿಸಿದ್ದೇವೆ.

ಅಂಜನಾದ್ರಿಯ ಸಮಗ್ರ ಅಭಿವೃದ್ಧಿಗೆ ಈಗಾಗಲೆ ಬಜೆಟ್ ನಲ್ಲಿ 100 ಕೋಟಿ ರೂಪಾಯಿ ಅನುದಾನ‌ ಘೋಷಣೆ ಮಾಡಿದ್ದೇನೆ. ಅಂಜನಾದ್ರಿಗೆ ಪ್ರತಿವರ್ಷವೂ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಆಗಮಿಸುವ ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸುವುದು ನಮ್ಮ‌ಕರ್ತವ್ಯ. ಬರುವ ದಿನಗಳಲ್ಲಿ ಯಾತ್ರಿಗಳು ಆಗಮಿಸುವ ಸಂಖ್ಯೆ ಹೆಚ್ಚಳವಾಗಲಿದೆ. ಹೀಗಾಗಿ ಅಂಜನಾದ್ರಿ ಬೆಟ್ಟದ ಮೇಲೂ ಮತ್ತು ಕೆಳಗೂ ಅಭಿವೃದ್ಧಿ ಆಗಬೇಕಾದ ಅಗತ್ಯವಿದೆ.

ಈಗಾಗಲೇ ಸರ್ಕಾರದ ಆದೇಶದೊಂದಿಗೆ ಅಂಜನಾದ್ರಿಗೆ ಬಂದಿದ್ದೇನೆ. ಅಂಜನಾದ್ರಿಗೆ ಎಲ್ಲ ರೀತಿಯ ಸೌಕರ್ಯಗಳನ್ನು ಕಲ್ಪಿಸುವ ದೊಡ್ಡ ಗುರಿ ನಮ್ಮದಾಗಿದೆ. ಇಲ್ಲಿ ಯಾತ್ರಿಕರಿಗೆ ಆಸ್ಪತ್ರೆ, ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವುದು ನಮ್ಮ ಚಿಂತನೆಯಾಗಿದೆ. ಬೆಟ್ಟಕ್ಕೆ ರೂಪ್ ವೆ ವ್ಯವಸ್ಥೆ ಮಾಡಿ ವಯಸ್ಸಾದವರಿವೂ ಸಹ ಹನುಮಂತನ ದೇರ್ಶನ ಕಲ್ಪಿಸುವ ಚಿಂತನೆ ಇದೆ . ಬಜೆಟ್ ನಲ್ಲಿ ಜಿಲ್ಲೆಗೆ ನೀಡಿದ ಅನುದಾನದ ಕಾಮಗಾರಿಗಳಿಗೆ ಚಾಲನೆ ಕೊಡಲು ಬಂದಿದ್ದೇನೆ ಎಂದರು.

ಅಂಜಿನಾದ್ರಿಯಲ್ಲಿ ರೂಪ್ ವೆ ಗೆ ಮುಂದಿನ ಮುಂದಿನ ದಿನಗಳಲ್ಲಿ ಟೆಂಡರ್ ಕರೆಯಲಯ ಸೂಚನೆ‌ ನೀಡಿದ್ದೇನೆ. ಅಂಜನಾದ್ರಿಯ ಅಭಿವೃದ್ಧಿಗೆ ಈಗಾಗಲೆ ಮಾಸ್ಟರ್ ಪ್ಲಾನ್ ರೂಪಿಸಿದ್ದೇವೆ. ಅಂಜನಾದ್ರಿಯ ಜೊತೆಗೆ ಸುತ್ತಲಿನ ಪ್ರದೇಶಗಳನ್ನು ಅಭಿವೃದ್ಧಿ ಮಾಡಲಾಗುವುದು. ಬಜೆಟ್ ನಲ್ಲಿ ಘೋಷಿಸಿದಂತೆ ಅಂತಾರಾಷ್ಟ್ರೀಯ ಮಟ್ಟದ ಹಂಪಿ ಟೂರಿಸಂ ಸರ್ಕಿಟ್ ನ್ನು ಮಾಡಲು ಯೋಜಿಸಲಾಗಿದೆ. ಹಂಪಿ ಮತ್ತು ಮೈಸೂರನ್ನು ಪ್ರವಾಸೋದ್ಯಮ ದೃಷ್ಟಿಯಿಂದ ಅಂತಾರಾಷ್ಟ್ರೀಯ ಸರ್ಕಿಟ್ ಮಾಡಲು ಚಿಂತಿಸಿದ ಕಾರಣ ಯೋಜನೆ ರೂಪಿಸಲಾಗಿದೆ.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ