Breaking News
Home / ಜಿಲ್ಲೆ / ಬೆಂಗಳೂರು / ಅಧಿವೇಶನ ಆರಂಭಕ್ಕೆ 72 ಗಂಟೆಗಳ ಮುನ್ನ ಶಾಸಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ

ಅಧಿವೇಶನ ಆರಂಭಕ್ಕೆ 72 ಗಂಟೆಗಳ ಮುನ್ನ ಶಾಸಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ

Spread the love

ಬೆಂಗಳೂರು,ಸೆ.18- 141ನೇ ವಿಧಾನಮಂಡಲ ಅಧಿವೇಶನವು ಸೆ.21ರಿಂದ 8 ದಿನಗಳ ಕಾಲ ನಡೆಯಲಿದ್ದು, ಸದಸ್ಯರಿಗೆ ಕೋವಿಡ್19 ಪರೀಕ್ಷೆ ಮಾಡಿಸಿಕೊಂಡಿರುವ ದೃಢೀಕರಣ ಒದಗಿಸುವುದು ಕಡ್ಡಾಯವಾಗಿದೆ.

ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ವಿಧಾನಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಅವರು ರಾಜ್ಯದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಸದನ ಆರಂಭವಾಗುವ 72 ಗಂಟೆಗಳ ಮುಂಚಿತವಾಗಿ ಸದಸ್ಯರು ಆರೋಗ್ಯ ತಪಾಸಣೆ ಒಳಗಾಗಿ ಕೋವಿಡ್ 19ರ ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡು ದೃಢೀಕರಣವನ್ನು ತರಬೇಕೆಂದು ಕೋರಿದ್ದಾರೆ.

ಇಂದಿನಿಂದ ಅಧಿವೇಶನ ಮುಗಿಯುವವರೆಗೂ ವಿಧಾನಸೌಧದ ಬ್ಯಾಂಕ್ವೆಟ್‍ಹಾಲ್‍ನಲ್ಲಿ ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.  ಪ್ರತಿದಿನ ವಿಧಾನಪರಿಷತ್ ಸಭಾಂಗಣ ಹಾಗೂ ಮೊಗಸಾಲೆಯನ್ನು ಸಾನಿಟೈಸ್ ಮಾಡಲಾಗುತ್ತದೆ. ಸದಸ್ಯರ ಆಪ್ತ ಸಹಾಯಕರು, ಗನ್‍ಮ್ಯಾನ್‍ಗಳಿಗೆ ಬ್ಯಾಂಕ್ವೆಟ್ ಹಾಲ್ ಮುಂಭಾಗದಲ್ಲಿ ಕುಳಿತುಕೊಳ್ಳಲು ಆಸನದ ವ್ಯವಸ್ಥೆಯನ್ನು ಮಾಡಲಾಗುವುದು ಎಂದರು.

ಸಭಾಂಗಣದ ಒಳಗೆ ಕಾರ್ಯ ನಿರ್ವಹಿಸುವ ಅಧಿಕಾರಿಗಳು, ನೌಕರರು ಹಾಗೂ ಸದಸ್ಯರಿಗೆ ಫೇಸ್ ಮಾಸ್ಕ್ ಮತ್ತು ಫೇಸ್ ಶೀಲ್ಡ್ ಒದಗಿಸಲಾಗುತ್ತದೆ.  ಸದಸ್ಯರ ಮೇಜಿನ ಮೇಲೆ ಸ್ಯಾನಿಟೈಸರ್ ಬಾಟಲ್‍ಗಳನ್ನು ಇಡಲಾಗುವುದು. ಹಾಗೂ ಸದಸ್ಯರ ಆಸನಗಳ ನಡುವೆ ಪಾರದರ್ಶಕ ಫೈಬರ್‍ಶೀಟ್ ಅಳವಡಿಸಲಾಗುವುದು ಎಂದು ತಿಳಿಸಿದರು.

ಆರೋಗ್ಯದ ಹಿತದೃಷ್ಟಿಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಧಿಕಾರಿಗಳ ಸಂಖ್ಯೆಯನ್ನು ಸೀಮಿತಗೊಳಿಸಲು ಇಲಾಖಾ ಮುಖ್ಯಸ್ಥರಿಗೆ ಕೋರಲಾಗಿದೆ. ಎಲ್ಲಾ ಇಲಾಖೆಯ ಹಿರಿಯ ಅಧಿಕಾರಿಗಳು, ಸಚಿವರ ಆಪ್ತ ಕಾರ್ಯದರ್ಶಿಗಳು, ಅಧಿಕಾರಿಗಳು, ನೌಕರರು ಹಾಗೂ ಮಾಧ್ಯಮದವರಿಗೆ ಪ್ರೇಕ್ಷಕರ ಗ್ಯಾಲರಿಯಲ್ಲಿ ಆಸನದ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಸದನದ ಕಾರ್ಯಕಲಾಪಗಳ ವೀಕ್ಷಣೆಗೆ ಈ ಅಧಿವೇಶನದಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ವಿವರಿಸಿದರು.

ಮೊದಲ ದಿನ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗುವುದು ನಂತರ ಕಳೆದ ಅಧಿವೇಶನದಿಂದೀಚೆಗೆ ರಾಷ್ಟ್ರಪತಿ ಮತ್ತು ರಾಜ್ಯಪಾಲರಿಂದ ಅಂಗೀಕಾರವಾದ ವಿಧೇಯಕಗಳ ಪಟ್ಟಿಯನ್ನು ಸದನದ ಮುಂದೆ ಮಂಡಿಸಲಾಗುವುದು.  ಇದುವರೆಗೂ 1254 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ನಿಯಮ 72ರಡಿ 34 ಸೂಚನೆಗಳು ಹಾಗೂ ನಿಯಮ 330ರಡಿ 24 ಸೂಚನೆಗಳನ್ನು ಸ್ವೀಕರಿಸಲಾಗಿದೆ ಎಂದರು.

ಕಳೆದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಅಂಗೀಕಾರವಾಗಿರುವ ವಿಧೇಯಕಗಳ ಪೈಕಿ 9 ವಿಧೇಯಕಗಳು ವಿಧಾನಪರಿಷತ್‍ನಲ್ಲಿ ಬಾಕಿ ಇವೆ. ಈ ಪೈಕಿ 2 ವಿಧೇಯಕಗಳಿಗೆ ಸುಗ್ರಿವಾಜ್ಞೆ ಹೊರಡಿಸಲಾಗಿದ್ದು, ಅವುಗಳನ್ನು ಹಿಂಪಡೆಯಲಾಗುವುದು, ಉಳಿದ 7 ವಿಧೇಯಕಗಳು ಮಂಡನೆಯಾಗಲಿದೆ. ಸದಸ್ಯರ ಖಾಸಗಿ ಕಲಾಪಗಳಿಗೂ ಅವಕಾಶವಿದೆ ಎಂದು ತಿಳಿಸಿದರು.
ಸುದ್ದಿ ಗೋಷ್ಠಿಯಲ್ಲಿ ವಿಧಾನಪರಿಷತ್‍ನ ಜಂಟಿ ಕಾರ್ಯದರ್ಶಿ ನಿರ್ಮಲಾ, ಉಪಕಾರ್ಯದರ್ಶಿ ಗಾಯತ್ರಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ