Breaking News

ಕೆ.ಕೆ.ಕೊಪ್ಪ ಬಳಿಯ ಮಹಾವೀರ ಗೋಶಾಲೆಯಲ್ಲಿ ಒಂದು ಹಸುವನ್ನು ದತ್ತು ಪಡೆದುಕೊಂಡ ನಿತೇಶ್ ಪಾಟೀಲ

Spread the love

ಪುಣ್ಯಕೋಟಿ ದತ್ತು ಯೋಜನೆಯಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕೂಡ ಕೆ.ಕೆ.ಕೊಪ್ಪ ಬಳಿಯ ಮಹಾವೀರ ಗೋಶಾಲೆಯಲ್ಲಿ ಒಂದು ಹಸುವನ್ನು ದತ್ತು ಪಡೆದುಕೊಂಡಿದ್ದಾರೆ ಎಂದು ಉಪ ನಿರ್ದೆಶಕ ಡಾ.ರಾಜೀವ್ ಕೂಲೇರ ತಿಳಿಸಿದರು.

ಜಿಲ್ಲಾಧಿಕಾರಿಗಳು ಹಸು ದತ್ತು ಪಡೆಯುವ ಮೂಲಕ ಇತರರಿಗೂ ಸ್ಫೂರ್ತಿಯಾಗಿದ್ದಾರೆ. ಇದೇ ರೀತಿ ಸಾರ್ವಜನಿಕರು ಕೂಡ ಜಾನುವಾರುಗಳನ್ನು ದತ್ತು ಸ್ವೀಕರಿಸುವ ಮೂಲಕ ಪುಣ್ಯಕೋಟಿ ಯೋಜನೆಯನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿಕೊಂಡರು.

ದೇಣಿಗೆ ನೀಡಲು ಅಥವಾ ದತ್ತು ಪಡೆಯಲು ಬಯಸುವವರು ಹೆಚ್ಚಿನ ಮಾಹಿತಿಗಾಗಿ https://punyakoti.karahvs.in ವೆಬ್ ಸೈಟ್ ವಿಳಾಸಕ್ಕೆ ಭೇಟಿ‌ ನೀಡಬಹುದು ಎಂದು ಡಾ.ರಾಜೀವ ಕೂಲೇರ ಹೇಳಿದರು.

ನಗರದಲ್ಲಿ ಅಕ್ರಮವಾಗಿ ನಡೆಸಲಾಗುತ್ತಿರುವ ಕಸಾಯಿಖಾನೆಗಳನ್ನು ಕೂಡಲೇ ಬಂದ್ ಮಾಡಬೇಕು. ಒಂದು ವೇಳೆ ನಿಯಮಾವಳಿ ಪ್ರಕಾರ ಟ್ರೇಡ್ ಲೈಸೆನ್ಸ್ ನೀಡಲು ಸಾಧ್ಯವಿದ್ದರೆ ತಕ್ಷಣವೇ ಲೈಸೆನ್ಸ್ ನೀಡಬೇಕು ಎಂದು ಪಾಲಿಕೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.


Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ