ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದವರ ಪೈಕಿ ಶಾಬಾಜ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಆರು ಮಂದಿಗೆ ಗಂಭೀರ ಗಾಯಗಳಾಗಿವೆ.
ಮಹಮ್ಮದ್ ಉಸ್ಮಾನ್, ಶಿಫಾ, ರಿಯನ್ , ಖಮರುನ್ನಿಸಾ, ಜಬ್ರನ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುಗಳು ಜೋಗ್ ಜಲಪಾತ ವೀಕ್ಷಿಸಿ ವಾಪಸ್ ಆಗುತ್ತಿದ್ದ ವೇಳೆ ಅಪಘಾತ ನಡೆದಿದೆ. ಬಸ್ ನಲ್ಲಿದ್ದವರು ದಾವಣಗೆರೆ ಮೂಲದವರು.
ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನ 25 ಕಾರ್ಯಕರ್ತರು ಬಸ್ ನಲ್ಲಿ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರು ಚಾಲಕನ ದೇಹ ಛಿದ್ರ ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.