Breaking News

ಕಳೆದ 8 ವರ್ಷಗಳಿಂದ ಬಸವ ಪಂಚಮಿ ಆಚರಿಸುತ್ತ ಬರಲಾಗುತ್ತಿದೆ. ಆದರೆ, ಮೌಢ್ಯ, ಮೂಢನಂಬಿಕೆ ಇರುವುದರಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯವಾಗಿಲ್ಲ.

Spread the love

ನಾಗರ ಪಂಚಮಿಗೆ ಪರ್ಯಾಯವಾಗಿ ಬಸವ ಪಂಚಮಿ ಆಚರಿಸುವ ಮೂಲಕ ಘಟಪ್ರಭಾದ ಮಾನವ ಬಂಧುತ್ವ ವೇದಿಕೆ ವತಿಯಿಂದ ಘಟಪ್ರಭಾದ ಕೆಎಚ್‍ಐ ಆಸ್ಪತ್ರೆಯ ರೋಗಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಹಾಲು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಹೌದು ಇಂದು ಮಂಗಳವಾರ ಘಟಪ್ರಭಾದಲ್ಲಿ ನಾಗಪಂಚಮಿಗೆ ಪರ್ಯಾಯವಾಗಿ ಬಸವ ಪಂಚಮಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಘಟಪ್ರಭಾ ಕೆಎಚ್‍ಐ ಆಸ್ಪತ್ರೆಯ ರೋಗಿಗಳಿಗೆ ಹಾಲಿನ ಪಾಕೇಟ್‍ಗಳನ್ನು ವಿತರಿಸಲಾಯಿತು.

ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಸತೀಶ ಜಾರಕಿಹೊಳಿ, ಇಡೀ ದೇಶದ ತುಂಬೆಲ್ಲ ನಾಗರಪಂಚಮಿ ಆಚರಿಸುವ ವಾಡಿಕೆಯಿದೆ. ನಾಗರ ಪಂಚಮಿಗೆ ಪರ್ಯಾಯವಾಗಿ ನಾವು ಬಸವ ಪಂಚಮಿ ಆಚರಿಸುತ್ತಿದ್ದೇವೆ.

ಕಳೆದ 8 ವರ್ಷಗಳಿಂದ ಬಸವ ಪಂಚಮಿ ಆಚರಿಸುತ್ತ ಬರಲಾಗುತ್ತಿದೆ. ಆದರೆ, ಮೌಢ್ಯ, ಮೂಢನಂಬಿಕೆ ಇರುವುದರಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯವಾಗಿಲ್ಲ. ಹಂತ ಹಂತವಾಗಿ ಸಮಾಜದಲ್ಲಿ ಬದಲಾವಣೆ ತರಲು ಪ್ರಯತ್ನಿಸಲಾಗುವುದು. 12ನೇ ಶತಮಾನದಲ್ಲಿ ಬಸವಣ್ಣವರು ಜೀವಂತ ಹಾವು ಕಂಡು ಕೊಲ್ಲುವರು, ಕಲ್ಲ ನಾಗರ ಕಂಡರೆ ಹಾಲೆರೆಯುವರು ಎಂದು ಹೇಳಿದ್ದರು. ಆದರೆ, ಮೂಢ ನಂಬಿಕೆ, ಮೌಢ್ಯ ಹೆಚ್ಚಳವಾಗಿದೆ ಎಂದ ರು.


Spread the love

About Laxminews 24x7

Check Also

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ*

Spread the love 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ(ಶಿಡ್ಲಘಟ್ಟ), …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ