Breaking News
Home / ರಾಜಕೀಯ / ಮನೆಹಾನಿ ತಕ್ಷಣವೇ ಪರಿಹಾರ ನೀಡಲು ಸಿಎಂ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ

ಮನೆಹಾನಿ ತಕ್ಷಣವೇ ಪರಿಹಾರ ನೀಡಲು ಸಿಎಂ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ

Spread the love

ಹಿನ್ನೆಲೆಯಲ್ಲಿ ಬೆಳಗಾವಿ ಸೇರಿದಂತೆ ಹನ್ನೊಂದು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಂಗಳವಾರ ನಡೆಸಿದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.

ಮನೆಹಾನಿಯಾದ ಸಂದರ್ಭದಲ್ಲಿ ಯಾವುದೇ ಕುಟುಂಬಗಳು ಪರಿಹಾರದಿಂದ ವಂಚಿತಗೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಖಾನಾಪುರದಲ್ಲಿ ಮಳೆ ಜಾಸ್ತಿಯಾದಾಗ ಮಲಪ್ರಭಾ ನದಿ ನೀರು ಹರಿವು ಹೆಚ್ಚಾಗುತ್ತದೆ‌. ಆದ್ದರಿಂದ ನಿರಂತರ ನಿಗಾ ವಹಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಮಹಾರಾಷ್ಟ್ರದ ಲ್ಲಿ ಆಗುತ್ತಿರುವ ಮಳೆಯ ವಿವರ ಪಡೆದುಕೊಂಡ ಅವರು, ಕೊಯ್ನಾ, ರಾಜಾಪುರ ಸೇರಿದಂತೆ ಪ್ರತಿಯೊಂದು ಜಲಾಶಯಗಳ ಮಟ್ಟ ಹಾಗೂ ನೀರು ಬಿಡುಗಡೆಯ ಕುರಿತು ನಿಗಾ ವಹಿಸಬೇಕು ಎಂದು ತಿಳಿಸಿದರು.

ಪ್ರಕೃತಿ ವಿಕೋಪ ನಿರ್ವಹಣೆ; ಪೂರ್ವ ಸಿದ್ಧತೆಗೆ ಸೂಚನೆ:

ಅತಿವೃಷ್ಟಿಯಾಗುತ್ತಿರುವ ಹನ್ನೊಂದು ಜಿಲ್ಲೆಗಳಲ್ಲಿ ಸಂಭವನೀಯ ಪ್ರವಾಹ ಪರಿಸ್ಥಿತಿ ನಿರ್ವಹಣೆ ಹಾಗೂ ಜನರ ರಕ್ಷಣೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

 

ಭೂಕುಸಿತ, ಗುಡ್ಡಕುಸಿತ ಸಂಭವಿಸಬಹುದಾದ ಸ್ಥಳ ಹಾಗೂ ಗ್ರಾಮಗಳನ್ನು ಗುರುತಿಸಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮಕೈಗೊಳ್ಳಬೇಕು.
ಗುಡ್ಡಗಾಡು ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡ ಸಂದರ್ಭದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಬೇಕು.

 

ಮನೆಗಳಿಗೆ ನೀರು ನುಗ್ಗಿದ್ದರೆ ಕೂಡಲೇ ಪರಿಹಾರ ನೀಡಬೇಕು. ಗುಡ್ಡಕುಸಿತ ಸಂಭಾವ್ಯ ಇರುವ ಕಡೆಗಳಲ್ಲಿ ಕೂಡಲೇ ಅಲ್ಲಿನ ಕುಟುಂಬಗಳನ್ನು ಸ್ಥಳಾಂತರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅತಿವೃಷ್ಟಿಯಿಂದ ಮನೆಗಳು ಕುಸಿತಗೊಂಡಾಗ ತಕ್ಷಣವೇ ಪರಿಹಾರ ನೀಡಬೇಕು. ಒಂದು ವೇಳೆ ಹಣದ ಕೊರತೆ ಇದ್ದರೆ ಕೂಡಲೇ ದೂರವಾಣಿ ಮೂಲಕ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು.

 

ಮನೆಗಳ ಹಾನಿ ಉಂಟಾದಾಗ ಸಂಬಂಧಿಸಿದ ಕುಟುಂಬಗಳಿಗೆ ತಕ್ಷಣವೇ ಪರಿಹಾರ ಒದಗಿಸಲು ಸರಕಾರ ಬದ್ಧವಿದೆ. ಜಿಲ್ಲಾಧಿಕಾರಿಗಳು ಕೋರಿಕೆ ಸಲ್ಲಿಸಿದಲ್ಲಿ ಪರಿಹಾರ ಹಣವನ್ನು ಕೂಡಲೇ ಆಯಾ ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


Spread the love

About Laxminews 24x7

Check Also

ಬಂಗಾರ ದರ ಮತ್ತೆ ಇಳಿಕೆ

Spread the love 26: ಬಂಗಾರ ದರ ನಿನ್ನೆಗೆ ಅಂದರೆ ಜೂನ್‌ 25ಕ್ಕೆ ಹೋಲಿಕೆ ಮಾಡಿದರೆ ಇಂದು (ಜೂನ್‌ 24) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ