Breaking News
Home / ರಾಜಕೀಯ / ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಕೆಎಸ್ಆರ್​ಟಿಸಿ ಬಸ್​ಗಳನ್ನು ಎರವಲು ಸೇವೆ ನೀಡಿದ್ದರಿಂದ ಇಂದು ಬಸ್ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ

ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಕೆಎಸ್ಆರ್​ಟಿಸಿ ಬಸ್​ಗಳನ್ನು ಎರವಲು ಸೇವೆ ನೀಡಿದ್ದರಿಂದ ಇಂದು ಬಸ್ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ

Spread the love

ಬೆಂಗಳೂರು: ದಾವಣಗೆರೆಯಲ್ಲಿ ಇಂದು ನಡೆಯುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಾರಂಭಕ್ಕೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್​ಗಳನ್ನು ಎರವಲು ಸೇವೆಗೆ ನೀಡಿದ್ದು, ಇದರಿಂದ ಇಂದು ನಗರದಲ್ಲಿ ಬಸ್ ಪ್ರಯಾಣಿಕರಿಗೆ ತೊಂದರೆ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ.

ನಿನ್ನೆ ಮಧ್ಯಾಹ್ನವೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 700ಕ್ಕೂ ಹೆಚ್ಚು ಬಸ್ಸುಗಳು ದಾವಣಗೆರೆಯತ್ತ ಸಿದ್ದರಾಮಯ್ಯ ಅಭಿಮಾನಿಗಳನ್ನ ಕರೆದುಕೊಂಡು ತೆರಳಿದೆ. ಸಮಾರಂಭದ ಆಯೋಜಕರು ಈ ಬಸ್​ಗಳನ್ನು ಗುತ್ತಿಗೆ ರೂಪದಲ್ಲಿ ಪಡೆದಿದ್ದು, ಇಂದು ರಾತ್ರಿ ವೇಳೆಗೆ ವಾಪಸ್​ ಆಗಲಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ನಗರ ಕೇಂದ್ರದಿಂದ ವಿವಿಧ ಜಿಲ್ಲಾ ಕೇಂದ್ರಗಳಿಗೆ ತೆರಳುವ ಪ್ರಯಾಣಿಕರಿಗೆ ಇಂದು ಬಸ್ ಲಭ್ಯತೆ ಸಮರ್ಪಕವಾಗಿ ಸಿಗುವ ಸಾಧ್ಯತೆ ಕಡಿಮೆ ಇದೆ.

ನಿನ್ನೆ ಮಧ್ಯಾಹ್ನವೇ ಬಹುತೇಕ ಬಸ್​​​ಗಳು ದಾವಣಗೆರೆಯತ್ತ ಪ್ರಯಾಣ ಬೆಳೆಸಿದ್ದರಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಭಾಗಗಳಿಗೆ ತೆರಳುವ ಪ್ರಯಾಣಿಕರಿಗೆ ಬಸ್​ಗಳ ಕೊರತೆ ಎದುರಾಗಿತ್ತು. ಮಧ್ಯಾಹ್ನದ ನಂತರ ಹಲವಡೆಗಳಿಗೆ ಬಸ್ ಸಂಪರ್ಕ ಲಭಿಸಲಿಲ್ಲ. ಇದೇ ಸ್ಥಿತಿ ಇಂದು ಸಹ ಮುಂದುವರೆಯಲಿದ್ದು, ಬಸ್​ಗಳನ್ನೇ ಅವಲಂಬಿಸಿರುವ ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗುವುದು ಶತಸಿದ್ಧ.


Spread the love

About Laxminews 24x7

Check Also

ಬೈಲಹೊಂಗಲದಲ್ಲಿ ಇದ್ದಾರೆ ‘ಹತ್ತು ರೂಪಾಯಿ’ ಡಾಕ್ಟ್ರು

Spread the love ಬೈಲಹೊಂಗಲ: ಇದು ದುಬಾರಿ ಯುಗ. ಇಂದು ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಶುಲ್ಕ ಜನರ ಕೈಸುಡುತ್ತಿದೆ. ಆದರೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ