Breaking News
Home / ರಾಜಕೀಯ / ಆರು ದಿನವೂ ಬಗೆ ಬಗೆಯ ಊಟ; ಹೊಸ ಮೆನುವಿಗೆ ಮಕ್ಕಳು ನೀಡಿದ್ರು ಫುಲ್ ಮಾರ್ಕ್ಸ್

ಆರು ದಿನವೂ ಬಗೆ ಬಗೆಯ ಊಟ; ಹೊಸ ಮೆನುವಿಗೆ ಮಕ್ಕಳು ನೀಡಿದ್ರು ಫುಲ್ ಮಾರ್ಕ್ಸ್

Spread the love

ಬೆಂಗಳೂರು: ರಾಜ್ಯ ಸರ್ಕಾರ 2022-23ನೇ ಸಾಲಿನ ಪ್ರಧಾನಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌ ಯೋಜನೆಯಡಿ (Poshan abhiyaan) ಶಾಲೆಗಳ ಮಧ್ಯಾಹ್ನ ಊಟದ (Mid Day Meal) ಮೆನು ಸಿದ್ಧಪಡಿಸಿದೆ. ಹೊಸ ಮೆನು ಕಂಡು ವಿದ್ಯಾರ್ಥಿಗಳು (Students) ಸಂತೋಷ ವ್ಯಕ್ತಪಡಿಸಿದ್ದಾರೆ.

ಹೊಸ ಮೆನುವಿಗೆ ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ಮುಂದೆ ಶಾಲಾ ವಿದ್ಯಾರ್ಥಿಗಳಿಗೆ ಅವರ ಪ್ರದೇಶಕ್ಕೆ ಅನುಗುಣವಾಗಿ ಬಗೆ ಬಗೆಯ ಊಟ ಸಿಗಲಿದೆ. ಇದರ ಜೊತೆಗೆ ಮಕ್ಕಳಿಗೆ ಗುಣಮಟ್ಟದ ಆಹಾರ (Quality Food) ಲಭ್ಯವಾಗಲಿದೆ. ಪ್ರತಿ ದಿನ ಮಧ್ಯಾಹ್ನ ಮಕ್ಕಳಿಗೆ ಒಂದೇ ರೀತಿಯ ಆಹಾರ ನೀಡೋದರಿಂದ ಅಪೌಷ್ಟಿಕತೆ ಹೆಚ್ಚಾಗುವ ಸಾಧ್ಯತೆಗಳಿತ್ತು. ಈ ಹಿನ್ನೆಲೆ ಮಕ್ಕಳಿಗೆ ಬೇರೆ ಬೇರೆ ಗುಣಮಟ್ಟದ ಆಹಾರ ನೀಡುವಂತೆ ಕೇಂದ್ರ ರಾಜ್ಯ ಸರ್ಕಾರ ಸೂಚನೆ ನೀಡಿತ್ತು. ಸೂಚನೆ ಹಿನ್ನೆಲೆ ಹೊಸ ಮೆನು ಸಿದ್ಧವಾಗಿದೆ.

ಕೇಂದ್ರ ಸರ್ಕಾರದ ಆದೇಶದ ಬೆನ್ನಲ್ಲೇ ರಾಜ್ಯ ಸರ್ಕಾರ ಪರಿಷ್ಕೃತ ಮೆನು ಸಿದ್ಧಪಡಿಸಿದೆ. ಈ ಮೆನು ಆಧರಿಸಿ ಶಾಲೆಗಳು ಮಕ್ಕಳಿಗೆ ಬಿಸಿಯೂಟ ನೀಡಬೇಕು ಎಂದು ಹೇಳಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದಾಗಿ ಈ ಹೊಸ ಮೆನುವಿಗೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.


Spread the love

About Laxminews 24x7

Check Also

ಶ್ರೀಗಳು ಹೇಳಿದ ಮಾತ್ರಕ್ಕೆ ಮುಖ್ಯಮಂತ್ರಿ ಬದಲಾವಣೆ ಆಗಲ್ಲ, ಶಿವಶಂಕರಪ್ಪ

Spread the loveದಾವಣಗೆರೆ: ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಶ್ರೀಗಳು ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕು ಅಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ