Breaking News

ರಾಜ್ಯದ ‘ಸ್ಥಳೀಯ ಸಂಸ್ಥೆ’ಗಳ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಕನಿಷ್ಠ ವೇತನ ಜಾರಿ

Spread the love

ಬೆಂಗಳೂರು: ರಾಜ್ಯದಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವಂತ ನೌಕರರಿಗೆ ಸರ್ಕಾರ ಕನಿಷ್ಠ ವೇತನವನ್ನು ಜಾರಿಗೊಳಿಸುತ್ತಿದೆ. ಹೀಗಾಗಿ ವೇತನದಲ್ಲಿ ಭಾರಿ ಹೆಚ್ಚಳವಾಗಲಿದ್ದು, ಆ ವೇತನ ಪರಿಷ್ಕರಣೆಯಂತೆ ನಿಮಗೆ ವೇತನ ಸಿಗಲಿದೆ.

 

 

ಈ ಸಂಬಂಧ ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ವಿಭಾಗದ ಪೀಠಾಧಿಕಾರಿಗಳು ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಈ ಅಧಿಸೂಚನೆಯಂತೆ ರಾಜ್ಯಾಧ್ಯಂತ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಉದ್ಯೋಗ ಉದ್ದಿಮೆಯಲ್ಲಿ ಯಾವುದೇ ಕೆಲಸದಲ್ಲಿ ತೊಡಗಿರುವ ಕಾರ್ಮಿಕರಿಗೆ ಕನಿಷ್ಠ ವೇತನ ಕೋಷ್ಟಕದಲ್ಲಿ ನಿರ್ದಿಷ್ಟ ಪಡಿಸಿರುವಂತ ಕನಿಷ್ಠ ವೇತನ ದರಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರದ ಕರಡು ಪ್ರಸ್ತಾವನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿದೆ ಎಂದಿದ್ದಾರೆ.

ಈ ಕರಡು ಅಧಿಸೂಚನೆಗೆ ಸಲಹೆ, ಆಕ್ಷೇಪಣೆಗಳು, ಕರಡು ಪ್ರಸ್ತಾವನೆಯನ್ನು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಮುಂದೆ ಮಂಡಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಈ ಹಿಂದಿನ ಎಲ್ಲಾ ಅಧಿಸೂಚನೆಗಳನ್ನು ರದ್ದುಪಡಿಸಿ, ಕರ್ನಾಟಕ ರಾಜ್ಯಾಧ್ಯಂತ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಉದ್ಯೋಗ ಉದ್ದಿಮೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಈ ಅಧಿಸೂಚನೆ ಹೊರಡಿಸಿದ ದಿನಾಂಕದಿಂದ ಅನ್ವಯವಾಗುವಂತೆ ಕನಿಷ್ಠ ವೇತನವನ್ನು ಪರಿಷ್ಕರಿಸಲಾಗಿದೆ ಎಂದು ತಿಳಿಸಿದ್ದಾರೆ.

 


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ