Breaking News
Home / ರಾಜಕೀಯ / 841 ಸರ್ಕಾರಿ ವಕೀಲರ ವಜಾಗೊಳಿಸಿದ ಸಿಎಂ ಯೋಗಿ

841 ಸರ್ಕಾರಿ ವಕೀಲರ ವಜಾಗೊಳಿಸಿದ ಸಿಎಂ ಯೋಗಿ

Spread the love

ಲಖನೌ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ 841 ಜನ ಸರ್ಕಾರಿ ವಕೀಲರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಜಾಗೊಳಿಸಿ ಆದೇಶಿಸಿದೆ.

ಕಾನೂನು ಮತ್ತು ನ್ಯಾಯಾಂಗ ಇಲಾಖೆಯ ಪ್ರಧಾನ ಕಾರ್ಯದರ್ಶಿ ನಿಕುಂಜ್ ಅವರು ಈ ಆದೇಶ ಹೊರಡಿಸಿದ್ದಾರೆ.

ಆದರೆ, ಸರ್ಕಾರ ತನ್ನ ಆದೇಶದಲ್ಲಿ ವಕೀಲರ ವಜಾಕ್ಕೆ ಕಾರಣವನ್ನು ನೀಡಿಲ್ಲ.

ಅಲಹಾಬಾದ್ ಹೈಕೋರ್ಟ್ ಪೀಠದ ಎಲ್ಲ ಸಾರ್ವಜನಿಕ ಅಭಿಯೋಜಕರು, 505 ಜನ ರಾಜ್ಯ ನ್ಯಾಯಾಂಗ ಅಧಿಕಾರಿಗಳು, ಲಖನೌ ಹೈಕೋರ್ಟ್ ಪೀಠದ 336 ಜನ ಸರ್ಕಾರಿ ವಕೀಲರನ್ನು ವಜಾ ಮಾಡಲಾಗಿದೆ. ಇದರ ಜತೆಗೆ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿನೋದ್ ಕಾಂತ್ ಅವರನ್ನೂ ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ.

ಪ್ರಯಾಗ್‌ರಾಜ್ ನ್ಯಾಯಾಲಯದ 26 ಹೆಚ್ಚುವರಿ ಕಾಯಂ ವಕೀಲರು, 179 ಜನ ಕಾಯಂ ವಕೀಲರಿಗೆ ಕಡ್ಡಾಯ ರಜೆ ನೀಡಲಾಗಿದೆ. ಇದರ ಜೊತೆಗೆ 59 ಹೆಚ್ಚುವರಿ ಮುಖ್ಯ ಸ್ಥಾಯಿ ಮಂಡಳಿ ಮತ್ತು ಸ್ಥಾಯಿ ಪರಿಷತ್ ಸದಸ್ಯರನ್ನೂ ವಜಾ ಮಾಡಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ