ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಳಿಗೆ ಉಚಿತವಾಗಿ 75 ಯೂನಿಟ್ ವಿದ್ಯುತ್ ನೀಡುವ ಯೋಜನೆಯನ್ನು ಶೀಘ್ರವೇ ಅನುಷ್ಠಾನಗೊಳಿಸಬೇಕೆಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಇಂಧನ ಇಲಾಖೆ ಜಾರಿಗೆ ತಂದಿರುವ ಉಚಿತ ವಿದ್ಯುತ್ ಯೋಜನೆಯನ್ನು ತ್ವರಿತವಾಗಿ ಜಾರಿಗೆ ತರಬೇಕು. ಜೊತೆಗೆ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಕ್‌ಎ ತಕ್ಷಣಕ್ಕೆ ಚಾಲನೆ ನೀಡಬೇಕು ಎಂದು ಹೇಳಿದ್ದಾರೆ.