Breaking News
Home / ರಾಜಕೀಯ / ಪಿಎಸ್ಸೈ ನೇಮಕಾತಿ ಹಗರಣ: ದಿವ್ಯಾ ಹಾಗರಗಿ ವಿರುದ್ಧ ಹೈಕೋರ್ಟ್ ಅಸಮಾಧಾನ, ಪಿಐಎಲ್‌ ವಜಾ

ಪಿಎಸ್ಸೈ ನೇಮಕಾತಿ ಹಗರಣ: ದಿವ್ಯಾ ಹಾಗರಗಿ ವಿರುದ್ಧ ಹೈಕೋರ್ಟ್ ಅಸಮಾಧಾನ, ಪಿಐಎಲ್‌ ವಜಾ

Spread the love

ಬೆಂಗಳೂರು, ಆ.2: ಪಿಎಸ್ಸೈ ನೇಮಕಾತಿ ಹಗರಣದಲ್ಲಿ ಆರೋಪಿಯಾಗಿರುವ ದಿವ್ಯಾ ಹಾಗರಗಿ ಅವರ ಮನವಿಯನ್ನು ನಾವು ಏಕೆ ಪರಿಗಣಿಸಬೇಕೆಂದು ದಿವ್ಯಾ ಪರ ಹಾಜರಿದ್ದ ವಕೀಲರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಹಾಗರಗಿ ಸಲ್ಲಿಸಿದ್ದ ಪಿಐಎಲ್ ಅನ್ನು ವಜಾಗೊಳಿಸಿ ಆದೇಶಿಸಿದೆ.

 

ನರ್ಸಿಂಗ್ ಮಂಡಳಿ ಕಾರ್ಯವೈಖರಿ ಪ್ರಶ್ನಿಸಿ ದಿವ್ಯಾ ಹಾಗರಗಿ 2020ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ನ್ಯಾಯಪೀಠವು, ದಿವ್ಯಾ ಹಾಗರಗಿ ಅವರು ಕರ್ನಾಟಕ ನರ್ಸಿಂಗ್ ಮಂಡಳಿಯ ನಾಮನಿರ್ದೇಶಿತ ಸದಸ್ಯೆಯಾಗಿದ್ದಾರೆ. ಇದರ ಮಧ್ಯೆ ಅರ್ಜಿದಾರೆ ಅವರು ಪಿಎಸ್ಸೈ ನೇಮಕಾತಿ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ನರ್ಸಿಂಗ್ ಮಂಡಳಿಯು ಸೇವಾ ಸಂಸ್ಥೆಯಾಗಿದ್ದು, ಈ ಪ್ರಕರಣಗಳಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರಿಗಣಿಸಲಾಗದು ಎಂದು ಸರ್ವೋಚ್ಚ ನ್ಯಾಯಾಲಯ ಈಗಾಗಲೇ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಪಿಐಎಲ್ ಅನ್ನು ವಜಾ ಮಾಡಲಾಗಿದೆ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ದಿವ್ಯಾ ಹಾಗರಗಿ 2020ರ ನವೆಂಬರ್ ನಲ್ಲಿ ರಾಜ್ಯ ಸರಕಾರ, ಕರ್ನಾಟಕ ರಾಜ್ಯ ನರ್ಸಿಂಗ್ ಮಂಡಳಿ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಮತ್ತು ಕರ್ನಾಟಕ ನರ್ಸಿಂಗ್ ಮತ್ತು ಅರೆವೈದ್ಯಕೀಯ ವಿಜ್ಞಾನಗಳ ಶಿಕ್ಷಣ ಪ್ರಾಧಿಕಾರದ ವಿಶೇಷಾಧಿಕಾರಿ ಡಾ.ಎನ್.ರಾಮಕೃಷ್ಣಾರೆಡ್ಡಿ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಿ ದಿವ್ಯಾ ಹಾಗರಗಿ ಅವರು ನರ್ಸಿಂಗ್ ಮಂಡಳಿಯ ಕಾರ್ಯವೈಖರಿಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.

ಆದರೆ, ಏಕಸದಸ್ಯ ನ್ಯಾಯಪೀಠ, ಇದರಲ್ಲಿ ಸಾರ್ವಜನಿಕ ಹಿತಾಸಕ್ತಿ ಅಡಗಿರುವುದರಿಂದ ಅದನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿಗಣಿಸುವಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ವರ್ಗಾಯಿಸಿತ್ತು.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ