ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತ ಕಾರ್ಯಕ್ರಮದ ನಿಮಿತ್ತ ಬುಧವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ.
ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ ಅಮಿತ್ ಶಾ ಅವರನ್ನು ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬರಮಾಡಿಕೊಂಡಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಅಮಿತ್ ಶಾ ಅವರು ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಕೇಂದ್ರ ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಸಂಕಲ್ಪದಿಂದ ಸಿದ್ಧಿಯ 3 ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಯಲಹಂಕದ ಡೈರಿ ಘಟಕಕ್ಕೆ ಭೇಟಿ ನೀಡಿ ವಾಪಸ್ ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ದೆಹಲಿಗೆ ಹೋಗಲಿದ್ದಾರೆ.
Laxmi News 24×7