Breaking News

ರಾಜ್ಯ ರಾಜಕೀಯ ಇತಿಹಾಸದಲ್ಲಿಯೇ ಅತಿಹೆಚ್ಚು ಜನ ಸೇರಿದ ಕಾರ್ಯಕ್ರಮ ‘ಸಿದ್ದರಾಮಯ್ಯ ಅಮೃತ ಮಹೋತ್ಸ’ವ

Spread the love

ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಜನ್ಮ ದಿನದ ಅಮೃತ ಮಹೋತ್ಸವಕ್ಕೆ 10 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿದ್ದರು ಎನ್ನಲಾಗಿದೆ. ಬಹುಶ: ದೇಶದಲ್ಲಿಯೇ ಯಾವ ನಾಯಕನ ಹುಟ್ಟುಹಬ್ಬ ಇಷ್ಟೊಂದು ಅದ್ದೂರಿಯಾಗಿ ಆಚರಿಸಿರಲಿಲ್ಲ ಎಂದು ಹೇಳಲಾಗಿದೆ.

ರಾಜ್ಯದ ಮೂಲೆ ಮೂಲೆಗಳಿಂದಲೂ ದಾವಣಗೆರೆಗೆ ಜನಸಾಗರ ಹರಿದು ಬಂದಿತ್ತು.

ಕಿಲೋಮೀಟರುಗಟ್ಟಲೇ ಜನ ಸೇರಿದ್ದು, ಈ ಮೂಲಕ ರಾಜ್ಯದ ರಾಜಕೀಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಜನರು ಸೇರಿದ ಕಾರ್ಯಕ್ರಮ ಇದಾಗಿದೆ ಎನ್ನುವ ಹೆಗ್ಗಳಿಕೆಗೆ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಾಕ್ಷಿಯಾಗಿದೆ.

ಸುಮಾರು 5 ಲಕ್ಷಕ್ಕೂ ಅಧಿಕ ಜನ ಭಾಗವಹಿಸಬಹುದೆಂಬ ನಿರೀಕ್ಷೆ ಆಯೋಜಕರಲ್ಲಿತ್ತು, ಆದರೆ, 10 ಲಕ್ಷಕ್ಕೂ ಅಧಿಕ ಜನ ಕಾರ್ಯಕ್ರಮಕ್ಕೆ ಸಾವಿರಾರು ವಾಹನಗಳಲ್ಲಿ, ಪಾದಯಾತ್ರೆ ಮೂಲಕ ಆಗಮಿಸಿದ್ದರು. ಬೆಳಗ್ಗೆಯಿಂದ ಸಂಜೆಯವರೆಗೂ ನಿರಂತರವಾಗಿ ಊಟದ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 7 ಲಕ್ಷಕ್ಕೂ ಅಧಿಕ ಜನ ಊಟ ಮಾಡಿದ್ದಾರೆ. ಅಡುಗೆಗಾಗಿ 5 ಕೋಟಿ ರೂ. ವೆಚ್ಚ ಮಾಡಲಾಗಿದೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ