Breaking News

ತ್ತೂರು ಜನತೆ ಹಾಗೂ ರಾಣಿ ಚನ್ನಮ್ಮನಿಗೆ ಸರ್ಕಾರ ಅವಮಾನ ಮಾಡಿದೆ

Spread the love

ಬೆಳಗಾವಿ/ಚ.ಕಿತ್ತೂರು: ಚನ್ನಮ್ಮನ ಕಿತ್ತೂರು ಕೋಟೆಯ ಪ್ರತಿರೂಪ ಅರಮನೆಯನ್ನು ಬಚ್ಚನಕೇರಿಯಲ್ಲಿ ನಿರ್ಮಿಸಲು ಮುಂದಾಗಿರುವ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಕಿತ್ತೂರಿನ ಜನತೆ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

 

ಕಿತ್ತೂರಿನಲ್ಲಿ ಚನ್ನಮ್ಮ ಪ್ರತಿಮೆಗೆ ಗೌರವ ಸಲ್ಲಿಸಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಅಂಗಡಿ ಮುಂಗಟ್ಟು ಸೇರಿದಂತೆ ವ್ಯಾಪಾರ ವಹಿವಾಟು ಬಂದ್‌ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಿತ್ತೂರು ಬಂದ್‌ ಯಶಸ್ವಿಯಾಯಿತು. ನಂತರ ಬೆಳಗಾವಿ ನಗರಕ್ಕೆ ಆಗಮಿಸಿ ಜಿಲ್ಲಾ ಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ ಪ್ರತಿಭಟಿಸಿದರು.

ಮೊದಲಿನಿಂದಲೂ ಅರಮನೆ ಇರುವ ಜಾಗದಲ್ಲಿಯೇ ಅರಮನೆಯ ಪ್ರತಿರೂಪವನ್ನು ನಿರ್ಮಿಸಬೇಕು. ಆದರೆ ಸರ್ಕಾರ ಮತ್ತು ಜಿಲ್ಲಾಡಳಿತ ಕಿತ್ತೂ ರು ತಾಲೂಕಿನ ಬಚ್ಚನಕೇರಿ ಗ್ರಾಮದ 57 ಎಕರೆ ಜಾಗದಲ್ಲಿ ಕಿತ್ತೂರು ಕೋಟೆಯ ಪ್ರತಿರೂಪದ ಅರಮನೆ ನಿರ್ಮಾಣಕ್ಕೆ ಮುಂದಾಗಿದೆ. ಇದು ಕಿತ್ತೂರು ನಾಡಿಗೆ ಮಾಡಿರುವ ಘೋರ ಅವಮಾನವಾಗಿದೆ ಎಂದು ಆರೋಪಿಸಿದರು.

ಕಿತ್ತೂರಿನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ಕಿತ್ತೂರಿನ ಕೋಟೆಯ ಪ್ರತಿರೂಪವನ್ನು ಕಿತ್ತೂರು ಬಿಟ್ಟು ಬಚ್ಚನಕೇರಿ ಎಂಬ ಗ್ರಾಮದಲ್ಲಿ ನಿರ್ಮಿಸಲು ಹೊರಟಿರುವ ಸರ್ಕಾರದ ಕ್ರಮ ಖಂಡನೀಯ. ಸರ್ಕಾರ ಕಿತ್ತೂರನ್ನು ಹೊರಗಿಟ್ಟು ಬೇರೆ ಕಡೆಗೆ ಪ್ರತಿರೂಪದ ಅರಮನೆ ನಿರ್ಮಾಣಕ್ಕೆ ಆದೇಶ ಹೊರಡಿಸಿದೆ. ಕಿತ್ತೂರು ಜನತೆ ಹಾಗೂ ರಾಣಿ ಚನ್ನಮ್ಮನಿಗೆ ಸರ್ಕಾರ ಅವಮಾನ ಮಾಡಿದೆ ಎಂದು ಕಿಡಿಕಾರಿದರು.


Spread the love

About Laxminews 24x7

Check Also

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.

Spread the love ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ