Breaking News

ಕೊರೋನಾ ಅಬ್ಬರಕ್ಕೆ ಜಗತ್ತು ತತ್ತರ : 1.15 ಕೋಟಿ ಸೋಂಕಿತರು, 5.36 ಲಕ್ಷ ಸಾವು..!

Spread the love

ವಾಷ್ಟಿಂಗ್ಟನ್/ರಿಯೋ-ಡಿ-ಜನೈರೋ/ಮಾಸ್ಕೋ, ಜು.6- ಕೋವಿಡ್-19 ವೈರಸ್ ಅಟ್ಟಹಾಸದಿಂದ ಜಗತ್ತೇ ಹೈರಾಣಾಗಿದ್ದು, 240ಕ್ಕೂ ಹೆಚ್ಚು ದೇಶಗಳಲ್ಲಿ ರೋಗಿಗಳು ಮತ್ತು ಮೃತರÀ ಸಂಖ್ಯೆ ಅತ್ಯಧಿಕ ಪ್ರಮಾಣದಲ್ಲೇ ಮುಂದುವರಿದಿದೆ. ಜಗತ್ತಿನಾದ್ಯಂತ ಒಟ್ಟು ಸಾವಿನ ಸಂಖ್ಯೆ 5.36 ಲಕ್ಷ ಹಾಗೂ ಸೋಂಕಿತರ ಸಂಖ್ಯೆ 1.15 ಕೋಟಿ ದಾಟಿದೆ.

ಇದರ ನಡುವೆಯೂ ವಿಶ್ವದಲ್ಲಿ ಸುಮಾರು 65.39 ಲಕ್ಷ ರೋಗಿಗಳು ಚೇತರಿಸಿಕೊಂಡಿದ್ದಾರೆ ಅಥವಾ ಗುಣಮುಖರಾಗಿದ್ದಾರೆ. ಜಗತ್ತಿನಾದ್ಯಂತ ನಿನ್ನೆ ಮಧ್ಯರಾತ್ರಿವರೆಗೆ 5,36,900 ಮಂದಿ ಸಾವಿಗೀಡಾಗಿದ್ದು, 1,15,64,518 ಸೋಂಕು ಪ್ರಕರಣಗಳು ವರದಿಯಾಗಿದೆ..

ಸಕ್ರಿಯ ಪ್ರಕರಣಗಳ ಸಂಖ್ಯೆ 44.88 ಲಕ್ಷ ದಾಟಿದೆ. ಅಲ್ಲದೇ ಇನ್ನೂ 58,500ಕ್ಕೂ ಹೆಚ್ಚು ರೋಗಿಗಳ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುವ ಆತಂಕವಿದೆ.

ನಾಳೆ ವೇಳೆಗೆ ಸಾವಿನ ಸಂಖ್ಯೆ 5.38 ಲಕ್ಷ ಮತ್ತು ಸಾಂಕ್ರಾಮಿಕ ರೋಗಿಗಳ ಪ್ರಮಾಣ 1.17 ಕೋಟಿ ದಾಟುವ ಆತಂಕವಿದೆ.ವ್ಯಾಪಕ ಸಾವು-ನೋವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಮಧ್ಯೆ ರೋಗಿಗಳ ಚೇತರಿಕೆ/ಗುಣಮುಖ ಪ್ರಮಾಣದಲ್ಲೂ ವೃದ್ದಿ ಕಂಡುಬಂದಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 44.88 ಲಕ್ಷ ದಾಟಿದೆ. ಅಲ್ಲದೇ ಇನ್ನೂ 58,500ಕ್ಕೂ ಹೆಚ್ಚು ರೋಗಿಗಳ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುವ ಆತಂಕವಿದೆ.ವಿಶ್ವದಲ್ಲಿ ಈವರೆಗೆ 65,39,030 ಮಂದಿ ರೋಗಿಗಳು ಚೇತರಿಸಿಕೊಂಡಿದ್ದಾರೆ ಮತ್ತು ಗುಣಮುಖರಾಗಿದ್ದಾರೆ. ಅಮೆರಿಕ, ಬ್ರೆಜಿಲ್, ಭಾರತ, ರಷ್ಯಾ, ಮತ್ತು ಇಂಗ್ಲೆಂಡ್ ಕೊರೊನಾ ಕೇಸ್‍ಗಳಲ್ಲಿ ವಿಶ್ವದ ಟಾಪ್ ಫೈವ್ ದೇಶಗಳಾಗಿವೆ.

ನಾಳೆ ವೇಳೆಗೆ ಸಾವಿನ ಸಂಖ್ಯೆ 5.38 ಲಕ್ಷ ಮತ್ತು ಸಾಂಕ್ರಾಮಿಕ ರೋಗಿಗಳ ಪ್ರಮಾಣ 1.17 ಕೋಟಿ ದಾಟುವ ಆತಂಕವಿದೆ.ವ್ಯಾಪಕ ಸಾವು-ನೋವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಮಧ್ಯೆ ರೋಗಿಗಳ ಚೇತರಿಕೆ/ಗುಣಮುಖ ಪ್ರಮಾಣದಲ್ಲೂ ವೃದ್ದಿ ಕಂಡುಬಂದಿದೆ.


Spread the love

About Laxminews 24x7

Check Also

ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಅಲಿರೆಜಾ ಅರಾಫಿ ಆಯ್ಕೆ

Spread the loveಟೆಹ್ರಾನ್: ಇರಾನ್‌ನ ಇತಿಹಾಸದಲ್ಲೇ ಅತ್ಯಂತ ಭೀಕರ ಕ್ರಾಂತಿ ಮತ್ತು ಬದಲಾವಣೆಯ ಗಾಳಿ ಬೀಸುತ್ತಿದೆ. ಅಮೇರಿಕಾ-ಇಸ್ರೇಲ್ ಜಂಟಿ ವೈಮಾನಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ