Breaking News

ತ್ರಿವರ್ಣ ಧ್ವಜ ವೈಭವ; ಕೆಂಪುಕೋಟೆಯಿಂದ ಸಂಸತ್‌ ಭವನಕ್ಕೆ ಸಂಸದರ ಬೈಕ್‌ ರ‍್ಯಾಲಿ

Spread the love

ನವದೆಹಲಿ: ಸ್ವಾತಂತ್ರ್ಯದ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಹಲವು ಅಭಿಯಾನಗಳನ್ನು ಕೈಗೊಂಡಿರುವಂತೆಯೇ ಎಲ್ಲೆಲ್ಲೂ “ತ್ರಿವರ್ಣ ಧ್ವಜ’ಗಳು ಕಂಗೊಳಿಸತೊಡಗಿವೆ. ರಾಜಕೀಯ ನಾಯಕರಾದಿಯಾಗಿ ಎಲ್ಲರ ಪ್ರೊಫೈಲ್‌ ಪಿಕ್ಟರ್‌ಗಳಲ್ಲಿ ತಿರಂಗಾ ರಾರಾಜಿಸುತ್ತಿವೆ.

 

ಮಂಗಳವಾರವಷ್ಟೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು “ತಿರಂಗಾ ಉತ್ಸವ’ಕ್ಕೆ ಚಾಲನೆ ನೀಡಿದ್ದಾರೆ. ಸದ್ಯದಲ್ಲೇ ಮನೆ -ಮನೆಗಳಲ್ಲೂ ಧ್ವಜ ಹಾರಾಟ ನಡೆಯಲಿದೆ. ಇದರ ನಡುವೆಯೇ, ದೆಹಲಿಯಲ್ಲಿ ಬುಧವಾರ ಸಂಸದರು ತಿರಂಗಾ ಬೈಕ್‌ ರ‍್ಯಾಲಿ ನಡೆಸಿದ್ದಾರೆ.

ಕೆಂಪುಕೋಟೆಯಿಂದ ಹೊರಟು ಸಂಸತ್‌ ಭವನದವರೆಗೆ ಕೇಂದ್ರ ಸಚಿವರು ಸೇರಿದಂತೆ ಬಹುತೇಕ ಸಂಸದರು “ತ್ರಿವರ್ಣ ಧ್ವಜ’ದೊಂದಿಗೆ ದ್ವಿಚಕ್ರವಾಹನ ರ್ಯಾಲಿ ಕೈಗೊಂಡಿದ್ದಾರೆ. ನಾವು ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಈ ಮೂಲಕ ಗೌರವ ಸಲ್ಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ