ಗದಗ: ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯರಸ್ತೆಗಳ ಅಕ್ಕಪಕ್ಕ ಅನ ಧಿಕೃತ ಕಟ್ಟಡಗಳನ್ನು ನಿರ್ಮಿಸದಂತೆ ತಡೆಗಟ್ಟಲು ಲೋಕೋಪಯೋಗಿ ಇಲಾಖೆ ಯಿಂದ ಸ್ಪಷ್ಟ ನಿಯಮ ಜಾರಿಗೆ ತರಲಾಗಿದೆ ಎಂದು ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟನೆ ನೀಡಿರುವ ಅವರು, ಹೆದ್ದಾರಿಗಳ ಅಕ್ಕಪಕ್ಕ ಕಟ್ಟಡ ನಿರ್ಮಾಣದಲ್ಲಿ ಕನಿಷ್ಠ ಎಷ್ಟು ಪ್ರಮಾಣದ ಅಂತರ ಕಾಯ್ದುಕೊಳ್ಳಬೇಕೆಂಬ ವಿವರ ಗಳನ್ನೂ ನೀಡಿದ್ದಾರೆ.
ಈ ನಿಯಮದನ್ವಯ ರಾಜ್ಯ ಹೆದ್ದಾರಿಗಳ ಮಧ್ಯಭಾಗದಿಂದ 40 ಮೀ. ಅಂತರದವರೆಗೆ ಯಾವುದೇ ಕಟ್ಟಡ ಅಥವಾ ಅಂಗಡಿ ನಿರ್ಮಿಸುವಂತಿಲ್ಲ. ಜಿಲ್ಲಾ ಮುಖ್ಯರಸ್ತೆಗಳ ಮಧ್ಯಭಾಗದಿಂದ 25 ಮೀ. ಅಂತರದವರೆಗೆ ಯಾವುದೇ ಕಟ್ಟಡ ನಿರ್ಮಿಸುವಂತಿಲ್ಲ. ಸಿಟಿ ಕಾರ್ಪೊರೇಷನ್ ಪರಿಮಿತಿಯಿಂದ 15 ಕಿ.ಮೀ. ದೂರದವರೆಗೆ 12 ಮೀಟರ್ ಅಂತರ ಪಾಲಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.
Laxmi News 24×7