ತಾಂತ್ರಿಕ ತೊಂದರೆಯಿoದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಪಲ್ಟಿಯಾದ ಘಟನೆ ಅಥಣಿ ತಾಲೂಕಿನ ಕೋಕಟನೂರು ಹೊರವಲಯದಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಕಟನೂರು ಹೊರವಲಯದಲ್ಲಿ ಒಟ್ಟು ೬೪ ಪ್ರಯಾಣಿಕರಿದ್ದ ಅಥಣಿ ಸಾರಿಗೆ ಘಟಕದ ಬಸ್ ತಾಂತ್ರಿಕ ತೊಂದರೆಯಿoದ ರಸ್ತೆ ಪಕ್ಕಕ್ಕೆ ಬಂದು ಪಲ್ಟಿಯಾಗಿದೆ. ಸ್ಥಳೀಯರು ಕೂಡಲೇ ಪ್ರಯಾಣಿಕರನ್ನು ಬಸ್‌ನಿಂದ ಹೊರತೆಗೆದು ರಕ್ಷಿಸಿದ್ದಾರೆ.
ಈ ಬಸ್ಸು ಸಾವಳಗಿಯಿಂದ ಅಥಣಿಗೆ ಹೊರಟು ಎನ್ನಲಾಗಿದೆ. ಘಟನೆಯಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿದಂತೆ ಇಬ್ಬರು ಮಹಿಳೆಯರು ಸೇರಿ ನಾಲ್ವರಿಗೆ ಗಾಯಗೊಂಡಿದ್ದಾರೆ. ಓರ್ವ ಮಹಿಳೆಗೆ ಹೆಚ್ಚಿನ ಚಿಕಿತ್ಸೆಗಾಗಿ ಅಥಣಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Laxmi News 24×7