Breaking News

ಜಮೀನು ಕೆಲಸಕ್ಕೆಂದು ಹೋದ ರೈತ ನಾಪತ್ತೆ.. ನೀರುಪಾಲು ಶಂಕೆ

Spread the love

ರಾಯಚೂರು: ನಿನ್ನೆ ಸುರಿದ ಧಾರಾಕಾರ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ರೈತನೋರ್ವ ಕೊಚ್ಚಿ ಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಹೊರವಲಯದ ಹಳ್ಳದಲ್ಲಿ ಘಟನೆ ಜರುಗಿದೆ. ವೆಂಕಟೇಶ(36) ಕೊಚ್ಚಿ ಹೋದ ರೈತ ಎಂದು ಹೇಳಲಾಗುತ್ತಿದೆ.

ಜಮೀನು ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಮರಳುವಾಗ ಘಟನೆ ನಡೆದಿದೆ ಎಂದು ಶಂಕಿಸಲಾಗುತ್ತಿದೆ. ಘಟನಾ ಮಾಹಿತಿ ದೊರೆತ ಬಳಿಕ ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಬುಧವಾರ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯ ಹಳ್ಳಗಳೆಲ್ಲ ನೀರಿನಿಂದ ಭರ್ತಿಯಾಗಿ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿವೆ. ಇದರಿಂದ ಅಲ್ಲಲ್ಲಿ ಸಂಚಾರಕ್ಕೆ ಅಡಚಣೆಯಾಗಿ ತೊಂದರೆ ಅನುಭವಿಸುವಂತೆ ಆಗಿದೆ.


Spread the love

About Laxminews 24x7

Check Also

ಮಂತ್ರಾಲಯದಲ್ಲಿ ರಾಘವೇಂದ್ರ ರಾಜಕುಮಾರ್‌ಗೆ ಫ್ಲೋರಿಡಾ ವಿವಿ ಗೌರವ ಡಾಕ್ಟರೇಟ್ ಪ್ರದಾನ – ಶ್ರೀಗಳಿಂದ ಸನ್ಮಾನ

Spread the loveರಾಯಚೂರು: ಮಂತ್ರಾಲಯದಲ್ಲಿ ರಾಯರ ಗುರುವೈಭವೋತ್ಸವ ಸಂಭ್ರಮ ಮನೆಮಾಡಿದ್ದು, ಮಠದ ಕಾರ್ಯಕ್ರಮದಲ್ಲಿ ಅಮೆರಿಕದ ಫ್ಲೋರಿಡಾ ವಿವಿಯ ಗೌರವ ಡಾಕ್ಟರೇಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ