Breaking News
Home / ಜಿಲ್ಲೆ / ಬೆಳಗಾವಿ / ಬೆಳಿಗ್ಗೆ 8-11 ಗಂಟೆವರೆಗೆ ಭಾರಿ ವಾಹನಗಳಿಗೆ ಬೆಳಗಾವಿ ನಗರಕ್ಕೆ ನಿರ್ಬಂಧ ವಿಧಿಸುತ್ತೇವೆ: ನಗರ ಪೊಲೀಸ್ ಆಯುಕ್ತ ಬೋರಲಿಂಗಯ್ಯ

ಬೆಳಿಗ್ಗೆ 8-11 ಗಂಟೆವರೆಗೆ ಭಾರಿ ವಾಹನಗಳಿಗೆ ಬೆಳಗಾವಿ ನಗರಕ್ಕೆ ನಿರ್ಬಂಧ ವಿಧಿಸುತ್ತೇವೆ: ನಗರ ಪೊಲೀಸ್ ಆಯುಕ್ತ ಬೋರಲಿಂಗಯ್ಯ

Spread the love

ಬೆಳಿಗ್ಗೆ 9 ಗಂಟೆಯಿಂದ 11 ಗಂಟೆವರೆಗೆ ಅದೇ ರೀತಿ ಸಾಯಂಕಾಲ 4 ಗಂಟೆಯಿಂದ 8 ಗಂಟೆವರೆಗೆ ನಗರದ ಕೇಂದ್ರ ಸ್ಥಳಗಳಿಗೆ ಭಾರಿ ವಾಹನಗಳು ಬರದಂತೆ ಈಗಾಗಲೇ ಮಾರ್ಗಸೂಚಿ ಇದೆ. 7.30 ಅಥವಾ 8 ಗಂಟೆಯಿಂದ 11 ಗಂಟೆವರೆಗೆ ಬದಲಾವಣೆ ಮಾಡಬೇಕಾಗುತ್ತದೆ. ಈ ಬಗ್ಗೆ ವರದಿ ತರಿಸಿಕೊಂಡು ಶೀಘ್ರವೇ ಒಂದು ಆದೇಶ ಹೊರಡಿಸುತ್ತೇವೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಮಾಹಿತಿ ನೀಡಿದ್ದಾರೆ.

ಎರಡು ದಿನಗಳ ಅಂತರದಲ್ಲಿ ಇಬ್ಬರು ವಿದ್ಯಾರ್ಥಿಗಳು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಭಾರಿ ವಾಹನಗಳಿಂದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಕೆಲವು ಗೈಡ್‍ಲೈನ್ಸ ಮುಂಚೆಯಿಂದಲೂ ಇವೆ.

ಬೆಳಿಗ್ಗೆ 9 ಗಂಟೆಯಿಂದ 11 ಗಂಟೆವರೆಗೆ ಅದೇ ರೀತಿ ಸಾಯಂಕಾಲ 4 ಗಂಟೆಯಿಂದ 8 ಗಂಟೆವರೆಗೆ ನಗರದ ಕೇಂದ್ರ ಸ್ಥಳಗಳಿಗೆ ಭಾರಿ ವಾಹನಗಳು ಬರದಂತೆ ಮಾರ್ಗಸೂಚಿ ಇದೆ. ಇದನ್ನು ಜಾರಿಗೆ ತರಲು ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದ್ದೇವೆ. ಅವಶ್ಯಕತೆ ಕಂಡು ಬಂದಲ್ಲಿ ಸಮಯದ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

100ಕ್ಕೂ ಹೆಚ್ಚು ಶಾಲೆಗಳಿವೆ ಎಲ್ಲಾ ಕಡೆ ಸ್ಟಾಫ್ ಕೊಡಲು ಕಷ್ಟವಾಗುತ್ತದೆ. ಹೀಗಾಗಿ ಡಿಡಿಪಿಐ ಹಾಗೂ ಶಿಕ್ಷಣ ಇಲಾಖೆಯನ್ನು ಸೇರಿಸಿಕೊಂಡು ಶಾಲಾ, ಕಾಲೇಜು ಆಡಳಿತ ಮಂಡಳಿಯ ಜೊತೆಗೆ ಸಭೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಈ ಬಗ್ಗೆ ಒಂದು ವಿಶೇಷ ಕಾರ್ಯಾಚರಣೆ ಆರಂಭಿಸುತ್ತೇವೆ. 7.30, 8 ಗಂಟೆಯಿಂದ 11 ಗಂಟೆವರೆಗೆ ಬದಲಾವಣೆ ಮಾಡಬೇಕಾಗುತ್ತದೆ. ಈ ಬಗ್ಗೆ ವರದಿ ತರಿಸಿಕೊಂಡು ಒಂದು ನಿರ್ಧಾರಕ್ಕೆ ಬರುತ್ತೇವೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ