Home / ರಾಜಕೀಯ / ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಸಹಾಯಕ ಎಸಿಬಿ ಬಲೆಗೆ

ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಸಹಾಯಕ ಎಸಿಬಿ ಬಲೆಗೆ

Spread the love

ಸಾರ್ವಜನಿಕರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಲೆಕ್ಕಾಧಿಕಾರಿ ಮತ್ತು ಗ್ರಾಮ ಸಹಾಯಕ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ.

ಅಥಣಿ ತಾಲೂಕಿನ ಬಳಿಗೇರಿ ಗ್ರಾಮ ಲೆಕ್ಕಾಧಿಕಾರಿ ಉಮೇಶ್ ದನದಮನಿ ಹಾಗೂ ಗ್ರಾಮ ಸಹಾಯಕ ಪ್ರಹ್ಲಾದ ಸನದಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವವರು. ರಾಯಬಾಗ ತಾಲೂಕಿನ ಗಣಪತಿ ಮೊನಪ್ಪ ಬಡಿಗೇರ ಸಾಹಾರೂಗೇರಿ ಎಂಬುವವರು ಬೆಳಗಾವಿ ಎಸಿಬಿ ಠಾಣೆಯಲ್ಲಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ

. ಆರೋಪಿಗಳು ಆರಂಭದಲ್ಲಿ 8,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು ಬಳಿಕ 3000 ರೂ. ಲಂಚದ ಹಣವನ್ನು ಮುಂಗಡವಾಗಿ ಪಡೆದಿದ್ದರು. ನಂತರದಲ್ಲಿ ಮತ್ತೆ 10,500 ಗಳಿಗೆ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅಧಿಕಾರಿಗಳ ಲಂಚದಾಹಕ್ಕೆ ಬೇಸತ್ತು ಗಣಪತಿ ಮೊನಪ್ಪ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು.

ದೂರು ದಾರದಿಂದ 10,500 ರೂ. ಹಣವನ್ನು ಸ್ವೀಕರಿಸುವ ಸಂದರ್ಭದಲ್ಲಿ ಬೆಳಗಾವಿ ನಿಗ್ರಹದಳ ಅಧಿಕಾರಿಗಳು ದಾಳಿ ನಡೆಸಿ, ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅಲ್ಲದೇ ಬಳಿಗೇರಿ ಗ್ರಾಮ ಲೆಕ್ಕಾಧಿಕಾರಿಯ ಕಛೇರಿ ಮೇಲೆ ದಾಳಿ ನಡೆಸಿ ಶೋಧ ನಡೆಸಲಾಗಿದ್ದು, ಗ್ರಾಮ ಸಹಾಯಕ ಪ್ರಹ್ಲಾದ ಸನದಿ ಬಳಿ 19000ರೂ ಪತ್ತೆಯಾಗಿದ್ದು, ಹಣವನ್ನು ಜಪ್ತಿ ಮಾಡಲಾಗಿದೆ.

ನಿಗ್ರಹ ದಳದ ಅಧೀಕ್ಷಕ ಬಿ.ಎಸ್.ನೇಮಗೌಡ ಉತ್ತರ ವಲಯ, ಬೆಳಗಾವಿ ಅವರ ಮಾರ್ಗದರ್ಶನದಲ್ಲಿ ಪಿರ್ಯಾದಿಯವರು ಈ ಬಗ್ಗೆ ನೀಡಿದ ದೂರನ್ನು ಆಧರಿಸಿ ಜೆ.ಎಮ್.ಕರುಣಾಕರ ಶೆಟ್ಟಿ, ಪೆÇಲೀಸ್ ಉಪಾಧೀಕ್ಷಕರವರು ದಾಖಲಿಸಿಕೊಂಡಿದ್ದರು. ನಿರಂಜನ್ ಎಂ. ಪಾಟೀಲ ಪೆÇಲೀಸ ನಿರೀಕ್ಷಕರು, ಎ.ಎಸ್.ಗೂದಿಗೊಪ್ಪ, ಪೆÇಲೀಸ್ ನಿರೀಕ್ಷಕರು ಹಾಗೂ ಬೆಳಗಾವಿ ಎಸಿಬಿ ಠಾಣೆಯ ಸಿಬ್ಬಂದಿಗಳು ಈ ದಾಳಿಯಲ್ಲಿ ಭಾಗಿಯಾಗಿದ್ದರು.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ