Breaking News

ನರೇಂದ್ರ ಮೋದಿಯವರ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ

Spread the love

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಈ ನಡುವೆ ನಿನ್ನೆ ಪ್ರಧಾನಿ ಮೋದಿಯವರನ್ನು ಸಂಸತ್‍ನಲ್ಲಿ ಭೇಟಿ ಮಾಡಿದ್ದ ಯಡಿಯೂರಪ್ಪ ಭಾವುಕರಾಗಿ ಕಣ್ಣಿರಿಟ್ಟಿದ್ದಾರೆ ಎಂಬ ಸುದ್ದಿ ಲಭ್ಯವಾಗಿದೆ.

ಸಿಎಂ ಭೇಟಿ ವೇಳೆ ಪ್ರಧಾನಿ ಮೋದಿಯವರು ಬಿಎಸ್‍ವೈ ಆರೋಗ್ಯದ ಬಗ್ಗೆ ಅತೀವ ಕಾಳಜಿ ತೋರಿದ್ದು, ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಆರೋಗ್ಯದ ಬಗ್ಗೆ ಜಾಗೃತಿ ವಹಿಸಲು ಸಲಹೆ ನೀಡಿದ್ದಾರೆ. ವಯಸ್ಸಾಗಿದೆ, ಆರೋಗ್ಯ ಸಮಸ್ಯೆಗಳ ಕಡೆ ಹೆಚ್ಚು ನಿಗಾವಹಿಸಿ. ಕೊರೊನಾ ಸಂಧರ್ಭದಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಮೋದಿ ಹೇಳಿದ್ದಾರೆ. ಇದನ್ನು ಕಂಡು ಬಿಎಸ್‍ವೈ ಭಾವುಕರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೊರೊನಾದಿಂದ ಸಾವನ್ನಪ್ಪಿದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ವಿಚಾರ ಪ್ರಸ್ತಾಪಿಸಿ ಬೇಸರ ವ್ಯಕ್ತಪಡಿಸಿರುವ ಮೋದಿ, ವಿಡಿಯೋ ಕಾನ್ಫರೆನ್ಸ್ ಮೂಲಕವೇ ಸಭೆ ನಡೆಸಲು ಸೂಚನೆ ನೀಡಿದ್ದಾರೆ. ಇವರ ಜೊತೆಗೆ ಹಲವು ಕೇಂದ್ರ ಸಚಿವರು ಕೂಡ ಫೋನ್ ಮೂಲಕವೇ ಬೇಡಿಕೆಗಳು ತಿಳಿಸಿ. ಪ್ರಯಾಣ ಮಾಡಬೇಡಿ ಎಂದು ಸಲಹೆ ನೀಡಿದ್ದಾರೆ. ಕೇಂದ್ರ ನಾಯಕರ ಕಾಳಜಿಯನ್ನು ಕಂಡು ಬಿಎಸ್‍ವೈಯವರು ಭಾವುಕರಾಗಿದ್ದಾರೆ ಎನ್ನಲಾಗಿದೆ.

 


Spread the love

About Laxminews 24x7

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

Spread the love ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ