ಕಾರವಾರ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗೆ ಕಾರವಾರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ತ್ವರಿತ ವಿಚಾರಣೆಯ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಹಾಗೂ 1. 20 ಲಕ್ಷ ರೂ ದಂಡ ವಿಧಿಸಿದೆ.
ಮುಂಡಗೋಡದ ಓರಲಗಿಯ ಶಿವಾನಂದ ಗೌಳೇರ (60 ವರ್ಷ) ಶಿಕ್ಷೆಗೊಳಗಾದ ಅಪರಾಧಿ. ಈತ ಬಾಲಕಿಯನ್ನು ಮನೆೆ ಹಾಗೂ ಹೊಲಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಸೆ. 16- 2021ರಲ್ಲಿ ಪೋಕ್ಸೊ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಸಿಪಿಐ ಸಿದ್ದಪ್ಪ ಸಿಮಾನಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಅದರಂತೆ ಸುದೀರ್ಘ ವಿಚಾರಣೆ ಬಳಿಕ ನ್ಯಾಯಾಧೀಶರಾದ ಶಿವಾಜಿ ನಲವಾಡೆ ಅವರು ಅಪರಾಧಿಗೆ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸಂತ್ರಸ್ತೆ ಪರವಾಗಿ ಸರ್ಕಾರಿ ಅಭಿಯೋಜಕ ಶುಭಾ.ಆರ್ ಗಾಂವಕರ್ ವಾದಿಸಿದ್ದರು.
Laxmi News 24×7