Breaking News

ಬೆಳಗಾವಿಯಲ್ಲಿ ‌ಕೋವಿಡ್ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ

Spread the love

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ‌ಕೋವಿಡ್ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ ಆಗಿ, ನೂರರ ಗಡಿ ದಾಟಿದೆ. ಜಿಲ್ಲಾ ಆರೋಗ್ಯ ಇಲಾಖೆ ಹೊರಡಿಸಿರುವ ಕೋವಿಡ್ ಬುಲೆಟಿನ್​ನಲ್ಲಿ ಶುಕ್ರವಾರ 110 ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿವೆ

ಅಥಣಿಯಲ್ಲಿ 12, ಬೆಳಗಾವಿ ತಾಲೂಕಿನಲ್ಲಿ 14, ಹುಕ್ಕೇರಿ 02, ಚಿಕ್ಕೋಡಿ, ಗೋಕಾಕ, ಖಾನಾಪೂರ, ಸವದತ್ತಿ ತಾಲೂಕಿನಲ್ಲಿ ತಲಾ 5 ಸೋಂಕಿತ ಪ್ರಕರಣಗಳು ದಾಖಲಾಗಿದ್ದರೆ ರಾಮದುರ್ಗ ತಾಲೂಕಿನಲ್ಲಿ ಅತಿಹೆಚ್ಚು 62 ಸೋಂಕಿತ ಪ್ರಕರಣ ದಾಖಲಾಗಿವೆ.

ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 331 ಸಕ್ರಿಯ ಪ್ರಕರಣಗಳಿದ್ದು, ಇನ್ನೂ 1449 ಜನರ ಕೋವಿಡ್ ವರದಿ ಬರಬೇಕಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕಳೆದ ಒಂದು ವಾರಗಳಿಂದ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ‌ನಿರಂತರವಾಗಿ ಏರುತ್ತಿದ್ದು, ಅನಾಹುತ ಸಂಭವಿಸುವ ಮುನ್ನವೇ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ