Breaking News

ರೈಲು ನಿಲ್ದಾಣದಲ್ಲಿ ವಕ್ತಿಯೋರ್ವನಿಗೆ ಚಾಕುವಿನಿಂದ ಇರಿದು ಕೊಲೆಗೆ ಪ್ರಯತ್ನ

Spread the love

ರೈಲು ನಿಲ್ದಾಣದಲ್ಲಿ ವಕ್ತಿಯೋರ್ವನಿಗೆ ಚಾಕುವಿನಿಂದ ಇರಿದು ಕೊಲೆಗೆ ಪ್ರಯತ್ನ ನಡೆಸಿದ ಓರ್ವ ವ್ಯಕ್ತಿಯನ್ನು ರೈಲ್ವೆ ಪೆÇಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ ಘಟನೆ ಖಾನಾಪುರದ ಲೋಂಡಾ ರೈಲು ನಿಲ್ದಾಣದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ನಾಸೀರ ಇಸ್ಮಾಯಿಲ್ ಪಠಾಣ (32) ಎಂಬುವರ ಮೇಲೆ ಬುಧವಾರ ರಾತ್ರಿ ಲೋಂಡಾ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ನಂ 1 ಹಾಗೂ 2 ರ ನಡುವಿನ ಓವರ್ ಬ್ರಿಡ್ಜ್ ಮೇಲೆ ನಡೆದಿದೆ. ಅದೇ ಗ್ರಾಮದ ಬಶೀರ ರಫೀಕ ಶೇಖ ಎಂಬುವರು ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದ್ದ.

ಮಾರಣಾಂತಿಕವಾಗಿ ಹಲ್ಲೆಗೊಳಗಾದ ನಾಸೀರ ಪಠಾಣ ನನ್ನು ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೊಳಗಾದ ನಾಸೀರನ ಸಹೋದರ ತರ್ಬೇಜ್ ಇಸ್ಮಾಯಿಲ್ ಪಠಾಣ ರೈಲ್ವೆ ಪೆÇಲೀಸರಿಗೆ ಈ ಕುರಿತಂತೆ ದೂರು ನೀಡಿದ್ದರು.

 


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ